ಕೊಪ್ಪಳ : ರಸ್ತೆ ಬೇಕು ಅಂದ್ರೆ ಗ್ಯಾರಂಟಿ ಬಂದ್ ಅಂತ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಇದೀಗ ತಮ್ಮ ಹೇಳಿಕೆಗೆ ಉಲ್ಟಾ ಹೊಡೆದಿದ್ದು, ಯಾವ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸಲ್ಲ. ಯಾವುದೇ ಗೊಂದಲ ಬೇಡ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.
ರಸ್ತೆ ಬೇಕೆಂದರೆ ಗ್ಯಾರಂಟಿ ಯೋಜನೆ ಬಂದ್ ಮಾಡಲಾಗುವುದು ಎಂದು ನೀಡಿದ್ದ ಹೇಳಿಕೆಗೆ ನಿನ್ನೆ ಸ್ಪಷ್ಟನೆ ನೀಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಹಣದ ಕೊರತೆ ಉಂಟಾಗಿಲ್ಲ. ಗ್ಯಾರಂಟಿಯಿಂದ ಜನರಿಗೆ 52 ಸಾವಿರ ಕೋಟಿ ನೀಡುತ್ತೇವೆ. ಜತೆಗೆ, ಜನರಿಗೆ ಸಬ್ಸಿಡಿಯಾಗಿ ಸಹ ಇನ್ನೂ 50 ಸಾವಿರ ಕೋಟಿ ನೀಡುತ್ತಿದ್ದೇವೆ ಎಂದರು.
ಹೇಳಿಕೆ ತಪ್ಪಾಗಿ ಅರ್ಥೈಸುತ್ತಿದ್ದಾರೆ. ಹಳ್ಳಿಯಲ್ಲಿ ಮಾತನಾಡುವ ಸಂದರ್ಭ ಒಂದೇ ವರ್ಷ ಎಲ್ಲ ಕೆಲಸ ಮಾಡಬೇಕು ಎಂದರೆ ಹೇಂಗಪ್ಪಾ, ಮುಂದಿನ ವರ್ಷ ಗ್ರಾಮೀಣ ರಸ್ತೆಗಳನ್ನು ಮಾಡಿ ಕೊಡುತ್ತೇನೆ ಎಂದು ಹೇಳಿದ್ದೇನೆ. ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತಗೊಂಡಿಲ್ಲ. ಇನ್ನೂ ಹೆಚ್ಚಿನ ಅಭಿವೃದ್ಧಿ ಆಗಿದೆ. ಇದರ ಜತೆಗೆ ಅಭಿವೃದ್ಧಿಗೂ ಸಾಕಷ್ಟು ಹಣ ನೀಡಿದ್ದೇವೆ. ಅಭಿವೃದ್ಧಿಗೆ ಮುಖ್ಯಮಂತ್ರಿ ಸಾಕಷ್ಟು ಅನುದಾನ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂದು ವ್ಯತಿರಿಕ್ತ ಹೇಳಿಕೆ ನೀಡಿಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವ ಣೆಯ ಪ್ರಶ್ನೆಯೇ ಇಲ್ಲ. ಜನಪರ ಯೋಜನೆ ನೀಡುತ್ತಿರುವ, ಉತ್ತಮ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನವರೇ ಪೂರ್ಣಾವಧಿ ಮುಖ್ಯಮಂತ್ರಿ ಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದರು.