ಬೆಂಗಳೂರು : ರಾಜ್ಯದಲ್ಲಿ ಮಳೆ ಹೆಚ್ಚಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಾನ್ಸೂನ್ ಚುರುಕಾಗಿದೆ. ಈಗಾಗಲೇ ಮಲೆನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಹಲವು ಅವಾಂತರಗಳು ಸಹ ಸೃಷ್ಟಿಯಾಗಿವೆ. ಇದೀಗ ಕರಾವಳಿ ಭಾಗದ 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯ ಹಲವೆಡೆ ಮನೆಗಳಿಗೆ ಹಾನಿಯಾಗಿದೆ, ವಿದ್ಯುತ್ ಕಂಬಗಳು ಬಿದ್ದಿವೆ. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಿಂದ ಮನೆಗಳು ಕುಸಿದಿವೆ ಮತ್ತು ಬೆಳೆಗಳು ನಾಶವಾಗಿವೆ. ಜುಲೈ 7 ರಿಂದ ಕರಾವಳಿಗೆ ಮತ್ತೆ ಯೆಲ್ಲೋ ಅಲರ್ಟ್ ನೀಡಲಾಗಿದೆ
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಇಂದು ಭಾರೀ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೂ ಇಂದು ಮಾತ್ರ ಯೆಲ್ಲೋ ಅಲರ್ಟ್ ಕೊಡಲಾಗಿದೆ. ನಾಳೆಯಿಂದ ಮಳೆ ಕಡಿಮೆ ಆಗಲಿದೆ. ಜು.7 ಮತ್ತು 8, 9, 10 , 11 ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೊಅಲರ್ಟ್ ನೀಡಲಾಗಿದೆ. ಜು.7ರಂದು ಮಲೆನಾಡಿನ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೊಅಲರ್ಟ್ ನೀಡಲಾಗಿದ್ದು, ಇನ್ನುಳಿದ ಎಲ್ಲಾ ಜಿಲ್ಲೆಗಳಲ್ಲಿಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.