ಬೆಂಗಳೂರು : ಮಾಜಿ ಪ್ರಿಯಸಿಗೆ ಯುವಕನೊಬ್ಬ ಅಶ್ಲೀಲ ಮೆಸೇಜ್ ಕಳಿಸಿದ್ದಾನೆಂದು ಆತನನ್ನು ಕಿಡ್ನ್ಯಾಪ್ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದೋಯ್ದು ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಂಧಿತ ಎಲ್ಲಾ ಆರೋಪಿಗಳನ್ನು ಜಾಮಿನಿನ ಮೇಲೆ ಬಿಡುಗಡೆ ಮಾಡಿದ್ದು, ಇನ್ನು 17 ವರ್ಷದ ಬಾಲಕಿಯನ್ನು ಪೊಲೀಸರು ಮಾಡಿದ್ದಾರೆ
ಹೌದು ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ 17 ವರ್ಷದ ಬಾಲಕಿಯನ್ನು ಅರೆಸ್ಟ್ ಮಾಡಿದ್ದಾರೆ. ಬಾಲಕಿಯನ್ನು ಬಂಧಿಸಿ ಪೊಲೀಸರು ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನನ್ನು ಬಟ್ಟೆ ಬಿಚ್ಚಿಸಿ ಮರಣಾಂತಿಕ ಹಲ್ಲೆ ನಡೆಸಿದ್ದರು ಈಗಾಗಲೇ ಬಂಧಿತ ಎಲ್ಲಾ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದು, ಹೇಮಂತ್, ಯಶವಂತ್, ಶಿವಶಂಕರ್ ಮತ್ತು ಶಶಾಂಕ ಗೌಡ ಬಿಡುಗಡೆಯಾಗಿದ್ದಾರೆ. ಯುವಕ ಕುಶಾಲ್ ಬಟ್ಟೆ ಬಿಚ್ಚಿ ಮಾರಣಾಂತಿಕ ಹಲ್ಲೆ ನಡೆಸಿ ಆರೋಪಿಗಳು ವಿಕೃತಿ ಮೆರೆದಿದ್ದರು.