ಬೆಂಗಳೂರು: ರಾಜ್ಯದಲ್ಲಿ ಹೃಯಾಘಾತದಿಂದ ಸರಣಿ ಸಾವಿನ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ಅಧ್ಯಯನಕ್ಕಾಗಿ ತಾಂತ್ರಿಕ ಸಲಹಾ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಹಠಾತ್ ಹೃದಯಾಘಾತ ಹೆಚ್ಚಳಕ್ಕೆ ಕಾರಣವೇನು ಎಂಬುದರ ಬಗ್ಗೆ ಅಧ್ಯಯನ ನಡೆಸಿದೆ. ಹೃದ್ರೋಗಿಗಳನ್ನು ಅಧ್ಯಯಕ್ಕೆ ಒಳಪಡಿಸಿ ವರದಿ ತಯಾರಿಸಿ, ಇದೀಗ ಆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆ ವರದಿಯಲ್ಲಿ ಏನಿದೆ ಎನ್ನುವ ಬಗ್ಗೆ ಮುಂದೆ ಓದಿ.
ಜಯದೇವ ಆಸ್ಪತ್ರೆ ನಿರ್ದೇಶಕ ರವೀಂದ್ರನಾಥ್ ನೇತೃತ್ವದ ಸಮಿತಿ, 251 ರೋಗಿಗಳನ್ನು ಅಧ್ಯಯನಕ್ಕೆ ಒಳಪಡಿಸಿತ್ತು. ಅದರಲ್ಲೂ ಮೂರು ವಯೋವರ್ಗಗಳನ್ನು ಗುರುತಿಸಿ ಅಧ್ಯಯನ ನಡೆಸಿದ್ದರು. 30 ವರ್ಷಕ್ಕಿಂತ ಕಡಿಮೆ ವಯಸ್ಸಿನ 12 ಹೃದ್ರೋಗಿಗಳ ಬಗ್ಗೆ ಅಧ್ಯಯನ ನಡೆಸಲಾಗಿತ್ತು. 31 ರಿಂದ 40 ವಯಸ್ಸಿನ 66 ಹೃದ್ರೋಗಿಗಳ ಬಗ್ಗೆ ಅಧ್ಯಯನ ಮಾಡಲಾಗಿತ್ತು. ಜೊತೆಗೆ 41 ರಿಂದ 45 ವಯಸ್ಸಿನ 172 ಹೃದ್ರೋಗಿಗಳ ಬಗ್ಗೆ ಅಧ್ಯಯನ ಮಾಡಲಾಗಿತ್ತು.
ತಜ್ಞರ ವರದಿಯ ಪ್ರಕಾರ, ಒಟ್ಟು 251 ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. 218 ಜನ ಪುರುಷರಿದ್ದು, 33 ಮಹಿಳೆಯರನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ. 251 ರೋಗಿಗಳಲ್ಲಿ 87 ಮಂದಿಯಲ್ಲಿ ಮಧುಮೇಹ ಕಂಡುಬಂದಿದೆ. 102 ರೋಗಿಗಳಿಗೆ ಬಿಪಿ, 35 ಕೊಲೆಸ್ಟ್ರಾಲ್ ಇದೆ. 40 ಮಂದಿಗೆ ಹೃದಯ ಸಂಬಂಧಿ ಕಾಯಿಲೆ ಇದೆ. 111 ಮಂದಿ ಧೂಮಪಾನಿಗಳಾಗಿದ್ದಾರೆ. 19 ಮಂದಿಗೆ ಕೊವಿಡ್ ಸೋಂಕೊನ ಹಿನ್ನೆಲೆ ಇತ್ತು. ಇನ್ನುಳಿದ 77 ಮಂದಿಗೆ ಯಾವುದೇ ರೋಗಗಳು ಇರಲಿಲ್ಲ ಎಂದು ಹೇಳಲಾಗಿದೆ. ಸದ್ಯ ನ್ಯೂರಾಲಜಿಕಲ್ ಸಮಸ್ಯೆಯ ಅಧ್ಯಯನ ಬಾಕಿ ಇದ್ದು, ನಿಮ್ಹಾನ್ಸ್ ತಜ್ಞರು ವರದಿ ಕೊಟ್ಟ ಬಳಿಕ ಅಂತಿಮ ವರದಿ ಸಲ್ಲಿಕೆಯಾಗಲಿದೆ ಎಂದು ತಿಳಿದು ಬಂದಿದೆ.
BIG NEWS: ರಾಜ್ಯಾಧ್ಯಂತ 200ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರ: ಗೃಹ ಸಚಿವ ಡಾ.ಜಿ ಪರಮೇಶ್ವರ್
BREAKING: 26/11 ದಾಳಿಯಲ್ಲಿ ಪಾಕ್ ಸೇನೆಯ ನಂಟು: ತಹವೂರ್ ರಾಣಾ ಬಹಿರಂಗ