ಬೆಂಗಳೂರು: ವನ್ಯಜೀವಿಗಳ ಸಂರಕ್ಷಣೆ ಹಾಗೂ ಅರಣ್ಯ ಜಮೀನು ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಇಲಾಖೆಯಲ್ಲಿ ಖಾಲಿ ಇರುವ 6 ಸಾವಿರ ಖಾಯಂ ಹಾಗೂ ಗುತ್ತಿಗೆ ಆಧಾರಿತ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.
ವನ್ಯಜೀವಿಗಳ ಸಂರಕ್ಷಣೆ ಹಾಗೂ ಅರಣ್ಯ ಜಮೀನು ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಇಲಾಖೆಯಲ್ಲಿ ಖಾಲಿ ಇರುವ 6 ಸಾವಿರ ಖಾಯಂ ಹಾಗೂ ಗುತ್ತಿಗೆ ಆಧಾರಿತ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ. @CMofKarnataka @siddaramaiah @DKShivakumar… pic.twitter.com/iuGtWWjMqV
— DIPR Karnataka (@KarnatakaVarthe) July 7, 2025
ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಭೂಕುಸಿತ ಸಂಭವಿಸುತ್ತಿದ್ದು, ಜೀವಹಾನಿ ಆಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು.
ಈ ನಿಟ್ಟಿನಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದಲ್ಲಿ, ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ತಜ್ಞರನ್ನೊಳಗೊಂಡ ಸಮಿತಿಯನ್ನು 10 ದಿನಗಳ ಒಳಗಾಗಿ ರಚಿಸಿ, 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದರು.
ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ಕಾಲೋನಿಯಲ್ಲಿರುವ ಜೀವವೈವಿಧ್ಯ ತಾಣದ 368 ವಿವಿಧ ಪ್ರಭೇದದ ಬೃಹತ್ ಮರಗಳಿದ್ದು, ಇವುಗಳನ್ನು ಸಂರಕ್ಷಿಸಲು ಈ ಪ್ರದೇಶವನ್ನು ಜೀವವೈವಿಧ್ಯ ಪಾರಂಪರಿಕ ತಾಣವಾಗಿ ಘೋಷಿಸುವಂತೆ ಸ್ಥಳೀಯರು ಮತ್ತು ಪರಿಸರ ಪ್ರೇಮಿಗಳು ಮನವಿ ಸಲ್ಲಿಸಿದ್ದು, ಈ ಸಂಬಂಧ ಪ್ರಕ್ರಿಯೆ ಆರಂಭಿಸುವಂತೆ ಮತ್ತು ಅಲ್ಲಿಯವರೆಗೆ ಮರ ಕಡಿಯಲು ಅನುಮತಿ ನೀಡದಂತೆ ಅರಣ್ಯ ಸಚಿವರು ಸೂಚಿಸಿದರು.
ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ನಿರ್ಮಾಣ: ಡಿಸಿಎಂ ಡಿ.ಕೆ ಶಿವಕುಮಾರ್