ಬೆಂಗಳೂರು: ಕರ್ನಾಟಕದಲ್ಲಿ ವೈದ್ಯಕೀಯ ಸೀಟುಗಳಿಗೆ ಎನ್ ಆರ್ ಐ ವಾರ್ಡ್ ಕ್ಲೇಮ್ ಮಾಡಿರುವ ಅಭ್ಯರ್ಥಿಗಳ ದಾಖಲೆ ಪರಿಶೀಲನೆಯನ್ನು ಜುಲೈ 8ರಿಂದ ಜುಲೈ 10ರವರೆಗೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೋಮವಾರ ತಿಳಿಸಿದೆ.
ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ ಗಳಿಗೆ ಎನ್ ಆರ್ ಐ ವಾರ್ಡ್ ಕ್ಲೇಮ್ ಮಾಡಿರುವ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಗೆ ಖುದ್ದು ಹಾಜರಾಗಿ ಪರಿಶೀಲನೆ ಮಾಡಿಸಿಕೊಳ್ಳಬೇಕು. ಮೊದಲ ದಿನ, ನೀಟ್ ನಲ್ಲಿ ನಾಲ್ಕು ಲಕ್ಷದವರೆಗೆ ರಾಂಕ್ ಪಡೆದವರು, ಎರಡನೇ ದಿನ 8 ಲಕ್ಷದವರೆಗೆ ರಾಂಕ್ ಪಡೆದವರು ಹಾಗೂ ಮೂರನೇ ದಿನ 12 ಲಕ್ಷದವರೆಗೆ ರಾಂಕ್ ಪಡೆದವರು ದಾಖಲೆ ಪರಿಶೀಲನೆಗೆ ಖುದ್ದು ಹಾಜರಾಗಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ಸೂಚಿಸಿದ್ದಾರೆ.
ವಿದೇಶಿ ನಾಗರಿಕತ್ವ ಹಾಗೂ ಎನ್ ಆರ್ ಐ ವಾರ್ಡ್ ಕ್ಲೇಮ್ ಮಾಡಿರುವುದಕ್ಕೆ ಸಂಬಂಧಿಸಿದಂತೆ ಪರಿಶೀಲನೆ ವೇಳೆ ಯಾವ್ಯಾವ ದಾಖಲೆಗಳನ್ನು ಸಲ್ಲಿಸಬೇಕು ಎಂಬ ಬಗ್ಗೆ ಕೆಇಎ ವೆಬ್ ಸೈಟ್ ನಲ್ಲಿ ಮಾಹಿತಿ ಪಡೆಯಬಹುದು ಎಂದು ತಿಳಿಸಲಾಗಿದೆ.
ಹೃದಾಯಾಘಾತಗಳಿಗೆ ಕೋವಿಡ್ ಲಸಿಕೆ ನೇರ ಕಾರಣವಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್