ಮಂಗಳೂರು : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮಂಗಳೂರಿನಲ್ಲಿ ಹೃದಯಾಘಾತದಿಂದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಂಗಳೂರಿನ ಸುರತ್ಕಲ್ ಕೃಷ್ಣಾಪುರದಲ್ಲಿ ಮನೆಯಲ್ಲಿ ಕುಸಿದುಬಿದ್ದು ಹೃದಯಾಘಾತದಿಂದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ಕೃಷ್ಣಾಪುರದ ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಮನೆಯಲ್ಲೇ ಕುಸಿದು ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿ ಅಫ್ತಾಬ್ (18) ಸಾವನ್ನಪ್ಪಿದ್ದಾನೆ.