ಮಂಗಳೂರು : ರಾಜ್ಯದಲ್ಲಿ ಹೃದಯಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಮಂಗಳೂರು ಜಿಲ್ಲೆಯ ಸೂರತ್ಕಲ್ ನಲ್ಲಿ ಮನೆಯಲ್ಲಿ ಸ್ನಾನಕ್ಕೆ ಎಂದು ತೆರಳುವ ವೇಳೆ ಇಂಜಿನಿಯರ್ ವಿದ್ಯಾರ್ಥಿ ಒಬ್ಬ ಹಾರ್ಟ್ ಅಟ್ಯಾಕ್ ಗೆ ಬಲಿಯಾಗಿದ್ದಾನೆ.
ಹೌದು ಹೃದಯಾಘಾತದಿಂದ 18 ವರ್ಷದ ಯುವಕ ಸಾವನಪ್ಪಿದ್ದಾನೆ, ಮಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಅಫ್ತಾಬ್ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಮಂಗಳೂರಿನ ಸೂರತ್ಕಲ್ ಕೃಷ್ಣಪುರದ ನಿವಾಸಿ ಆಗಿರೋ ಅಫ್ತಾಬ್ ಇಂದು ಹಾರ್ಟ್ ಅಟ್ಯಾಕ್ ನಿಂದ ಸಾವನಪ್ಪಿದ್ದಾನೆ. ಮನೆಯಲ್ಲಿ ಸ್ನಾನಕ್ಕೆ ಹೋಗುತ್ತಿದ್ದಾಗ ಏಕಾಏಕಿ ಹೃದಯಸ್ತಂಭನವಾಗಿದೆ. ಆಸ್ಪತ್ರೆಗೆ ಕರೆದೋಯ್ಯುವಷ್ಟರಲ್ಲಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.