ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೆ ಪ್ಲಾಸ್ಟಿಕ್ ಅಕ್ಕಿ ಜನರ ಹೊಟ್ಟೆ ಸೇರುತ್ತಿದೆ. ಚಿಕ್ಕಮಗಳೂರಿನ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಅಕ್ಕಿ ಮಾರಾಟ ಮಾಡಲಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬೊಮ್ಮೇನಹಳ್ಳಿಯಲ್ಲಿ ಪಡಿತರ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಅಕ್ಕಿ ವಿತರಿಸಿರುವುದು ಬೆಳಕಿಗೆ ಬಂದಿದೆ.
ಹೌದು ಚಿಕ್ಕಮಂಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಾದ್ಯಂತ ನ್ಯಾಯ ಬೆಲೆ ಅಂಗಡಿಗಳಲ್ಲಿ ನೀಡಿದ ಅಕ್ಕಿ ನೀರಿಗೆ ಹಾಕಿದರೆ ಪ್ಲಾಸ್ಟಿಕ್ ನಂತೆ ತೇಲುತ್ತಿವೆ. ತರೀಕೆರೆ ತಾಲೂಕಿನ ನೆರಲಕೆರೆ ನ್ಯಾಯಬೆಲೆ ಅಂಗಡಿಯಲ್ಲಿ ಅಕ್ಕಿ ವಿತರಿಸಲಾಗಿತ್ತು. 50 ಕೆಜಿ ಅಕ್ಕಿಯಲ್ಲಿ ಅರ್ಧದಷ್ಟು ಪ್ಲಾಸ್ಟಿಕ್ ಮಾದರಿ ಅಕ್ಕಿ ಕಂಡು ಬಂದಿದೆ. ನ್ಯಾಯಬೆಲೆ ಅಂಗಡಿ ವಿರುದ್ಧ ಇದೀಗ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ತರೀಕೆರೆ ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ಅರ್ಧದಷ್ಟು ಪ್ಲಾಸ್ಟಿಕ್ ವಿತರಿಸಲಾಗಿದೆ. ಪ್ಲಾಸ್ಟಿಕ್ ಮಾದರಿಯ ಅಕ್ಕಿ ನೋಡಿ ಫಲಾನುಭವಿಗಳು ಸಹಜವಾಗಿ ಆತಂಕಕ್ಕೆ ಒಳಗಾಗಿದ್ದಾರೆ. ನೀರಿಗೆ ಹಾಕಿದ ತಕ್ಷಣ ಅಕ್ಕಿ ನೀರಿನಲ್ಲಿ ತೇಲುತ್ತಿರುವುದು ಕಂಡು ಬಂದಿದೆ. ಈ ಕುರಿತು ತರೀಕೆರೆ ತಹಶೀಲ್ದಾರ್ ಗೆ ದೂರು ಸಹ ನೀಡಲಾಗಿದ್ದು, ಪ್ಲಾಸ್ಟಿಕ್ ಅಕ್ಕಿ ವಿತರಣೆ ಮಾಡುತ್ತಿರುವ ಕುರಿತು ತನಿಖೆ ಮಾಡಲು ಸೂಚನೆ ಸಹ ನೀಡಲಾಗಿದೆ ಎಂದು ತಿಳಿದು ಬಂದಿದೆ.