ಕಲಬುರ್ಗಿ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಇರುವಂತಹ ಜನೌಷಧ ಕೇಂದ್ರ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇದೀಗ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದ್ದು, 16 ಅರ್ಜಿದಾರರಿಗೆ ಸಂಬಂಧಿಸಿದಂತೆ ಹೈಕೋರ್ಟ್ ಇದೀಗ ಮಧ್ಯಂತರ ಆದೇಶ ತಡೆ ನೀಡಿದೆ.
ಹೌದು, ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. 16 ಅರ್ಜಿದಾರರಿಗೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ದಡಿ ನೀಡಿ ಆದೇಶ ಹೊರಡಿಸಿದೆ. ಸರಕಾರಿ ಆಸ್ಪತ್ರೆಯ ಆವರಣದಲ್ಲಿನ ಜನ ಔಷಧ ಕೇಂದ್ರ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಆದೇಶ ಪ್ರಶ್ನಿಸಿ ಕಲ್ಬುರ್ಗಿ ಹೈಕೋರ್ಟ್ ಬೀಟಕ್ಕೆ 16 ಅರ್ಜಿಗಳು ಸಲ್ಲಿಕೆಯಾಗಿದ್ದವು.
ಜನೌಷಧ ಕೇಂದ್ರ ತೆರೆಯಲು ಮೂಲಸೌಕರ್ಯ ಕಲ್ಪಿಸಲು ವೆಚ್ಚವಾಗಿದೆ. ಜನರಿಗೆ ಶೇಕಡ 50 ರಿಂದ 96 ರಿಯಾಯಿತಿ ದರದಲ್ಲಿ ಔಷಧ ನೀಡಲಾಗುತ್ತಿದೆ. ಸರ್ಕಾರದ ಆದೇಶದಿಂದ ನಮ್ಮ ಮೂಲಭೂತ ಹಕ್ಕಿಗೆ ಧಕ್ಕೆ ಆಗಿದೆ ಎಂದು ಅರ್ಹೀದಾರರ ಪರ ವಾದಿಸಲಾಯಿತು. ಈ ವೇಳೆ ಮುಂದಿನ ವಿಚಾರಣೆಯವರೆಗೆ ಅರ್ಜಿದಾರರ ಜನೌಷಧ ಕೇಂದ್ರ ಸ್ಥಗಿತ ಬೇಡ ಎಂದು ರಾಜ್ಯ ಸರ್ಕಾರದ ಆದೇಶಕ್ಕೆ ಕಲಬುರ್ಗಿ ಹೈಕೋರ್ಟ್ ಪೀಠ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.