ಬೆಂಗಳೂರು : ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಚಿವ ಈಶ್ವರ್ ಖಂಡ್ರೆ ಇಂದು ಅಧಿಕಾರಿಗಳಿಗೆ ಭರ್ತಿ ಮಾಡುವಂತೆ ಸೂಚನೆ ನೀಡಿದರು. ವಿಕಾಸ ಸೌಧದಲ್ಲಿ ಇಂದು ಅಧಿಕಾರಿಗಳಿಗೆ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದರು.
ಇಂದು ವಿಕಾಸ ಸಹೋದರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಈಶ್ವರ ಖಂಡ್ರೆ, ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಪಟ್ಟಿಮಾಡಿ. ನೇಮಕಾತಿ ಪ್ರಕ್ರಿಯೆ ಆರಂಭಿಸಲು ಮತ್ತು ತಕ್ಷಣ ಅಗತ್ಯವಿರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ಕೂಡಲೇ ನೇಮಕಾತಿ ಮಾಡಿಕೊಳ್ಳಲು ಹಾಗೂ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಅಗತ್ಯವಾದ ವಾಹನ ಮತ್ತು ಉಪಕರಣ ಖರೀದಿಗೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದರು.
ಕಾಡಂಚಿನ ಗ್ರಾಮಸ್ಥರ ಜೊತೆಗೆ ಸೌಹಾರ್ದಯುತ ಸಂಬಂಧ ಹೊಂದಬೇಕು ಜನರಿಗೆ ಅರಣ್ಯ ಮತ್ತು ವನ್ಯಜೀವಿಗಳ ಮಹತ್ವ ತಿಳಿಸಿಕೊಡಬೇಕು ಕಾಡಂಚಿನ ಜನರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಬೇಕು. ಜೊತೆಗೆ ಕಾಡಂಚಿನ ಜನರ ಮಕ್ಕಳಿಗೆ ಕೌಶಲ್ಯ ತರಬೇತಿ ಕೊಡಿಸಬೇಕು ಆಗ ಅರಣ್ಯ ಮತ್ತು ವನ್ಯಜೀವಿ ರಕ್ಷಣೆಗೆ ಜನರೇ ಮುಂದಾಗುತ್ತಾರೆ. ಈ ರೀತಿಯ ವಾತಾವರಣ ಸೃಷ್ಟಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದರು.