ಬೆಂಗಳೂರು : ಯುವ ವರ್ಗದಲ್ಲಿ ಹೃದಯಾಘಾತ, ಹಠಾತ್ ಸಾವು ಸಂಭವಿಸುತ್ತಿರುವ ಕಾರಣ ಮುಂದಿನ ಶೈಕ್ಷಣಿಕ ವರ್ಷದಿಂದ ಹೃದಯಾಘಾತ ಹಾಗೂ ಹೃದಯದ ಆರೋಗ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ವಿಚಾರವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಲು ಚಿಂತನೆ ನಡೆದಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ತಜ್ಞರ ಸಮಿತಿಯ ಶಿಫಾರಸ್ಸಿನಂತೆ ಕೈಗೊಳ್ಳಲಿರುವ ಎಲ್ಲ ಕ್ರಮಗಳ ಕುರಿತು ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿ ಮುಂದುವರಿಯಲಾಗುವುದು ಎಂದು ಹೇಳಿದ್ದಾರೆ.
ಮಧುಮೇಹ, ರಕ್ತದೊತ್ತಡ, ಒಬೆಸಿಟಿ ಹೆಚ್ಚಾಗಿದೆ. ಸ್ಟೀರಾಯ್ಡ್ ಹೆಚ್ಚಿನ ಬಳಕೆಯೂ ಕೂಡ ಕಾರಣವಾಗಿದೆ. ಕೋವಿಡ್ ಪೂರ್ವದಲ್ಲಿ ಜಯದೇವ ಆಸ್ಪತ್ರೆ ಮೆಡಿಕಲ್ ರೆಕಾರ್ಡ್ಸ್ ಗೆ ಹೊಲಿಕೆ ಮಾಡಿ ಕೂಡಾ ವರದಿ ಸಿದ್ಧಪಡಿಸಲಾಗಿದೆ. ಜಯದೇವ ಆಸ್ಪತ್ರೆಯಲ್ಲಿ 253 ಹೃದ್ರೋಗ ರೋಗಿಗಳ ಮೇಲೆ ಅಧ್ಯಯನ ಮಾಡಲಾಗಿದೆ. ಹೃದಯಾಘಾತಗಳಿಗೆ ಕೋವಿಡ್ ಲಸಿಕೆ ನೇರ ಕಾರಣವಲ್ಲ ಎಂದು ತಿಳಿದುಬಂದಿದೆ. ಎಂಆರ್ ಎನ್ ಎ ಲಸಿಕೆಯಿಂದ ಕೊಂಚ ಸಮಸ್ಯೆ ಎದುರಾಗಿದೆ. ಆದರೆ ಈ ಲಸಿಕೆಯನ್ನು ನಮ್ಮ ದೇಶದಲ್ಲಿ ಯಾರು ಪಡೆದಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಯುವ ವರ್ಗದಲ್ಲಿ ಹೃದಯಾಘಾತ, ಹಠಾತ್ ಸಾವು ಸಂಭವಿಸುತ್ತಿರುವ ಕಾರಣ ಮುಂದಿನ ಶೈಕ್ಷಣಿಕ ವರ್ಷದಿಂದ ಹೃದಯಾಘಾತ ಹಾಗೂ ಹೃದಯದ ಆರೋಗ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ವಿಚಾರವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಲು ಚಿಂತನೆ ನಡೆದಿದೆ. ತಜ್ಞರ ಸಮಿತಿಯ ಶಿಫಾರಸ್ಸಿನಂತೆ ಕೈಗೊಳ್ಳಲಿರುವ ಎಲ್ಲ ಕ್ರಮಗಳ ಕುರಿತು ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ… pic.twitter.com/nQAfdUZ4aN
— DIPR Karnataka (@KarnatakaVarthe) July 8, 2025