ದಾವಣಗೆರೆ : ದಾವಣಗೆರೆಯಲ್ಲಿ ಇಬ್ಬರು ಅಂತಾರಾಜ್ಯ ಮಹಿಳಾ ಕಳ್ಳಿಯರನ್ನು ಪೊಲೀಸರು ಬಂಧಿಸಿದ್ದಾರೆ.
ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮದ ನಿವಾಸಿ ಆರ್. ಮಂಜುಳಾ (32), ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಪೂರ್ಣಿಮಾ (20) ಬಂಧಿಸಲಾಗಿದೆ.
ಬಂಧಿತರಿಂದ 15 ಲಕ್ಷ ರೂ. ಮೌಲ್ಯದ 155 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ದಾವಣಗೆರೆ ನಗರದ ಕೆಟಿಜೆ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಳ್ಳಿಯರನ್ನು ಬಂಧಿಸಿದ್ದಾರೆ.
ದಾವಣಗೆರೆ ಕೇಂದ್ರ ಬಸ್ ನಿಲ್ದಾಣದಲ್ಲಿ ಟಿ.ಸುಧಾ ಎಂಬುವರ ಚಿನ್ನ ಕಳವು ಮಾಡಿದ್ದರು. ದಾವಣಗೆರೆ ರೈಲ್ವೆ ಪೊಲೀಸ್ ಠಾಣೆ, ಬಡಾವಣೆ ಪೊಲೀಸ್ ಠಾಣೆ, ಚಿತ್ರದುರ್ಗ, ಹೊಳಲ್ಕೆರೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು.