ಬೆಂಗಳೂರು: ನಗರದಲ್ಲಿ ದಿನೇ ದಿನೇ ಕ್ರೈಂಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇದೀಗ ನಗರದಲ್ಲಿ ಸ್ನೇಹಿತನ ಮನೆಗೆ ಬಂದಿದ್ದಂತ ಮಹಿಳೆಯ ಮೇಲೆಯೇ ಗ್ಯಾಂಗ್ ರೇಪ್ ನಡೆಸಿದಂತ ಪ್ರಕರಣ ಬೆಳಕಿಗೆ ಬಂದಿದೆ.
ಬೆಂಗಳೂರಿನ ದೊಡ್ಡ ನಾಗಮಂಗಲದ ಸಾಯಿ ಲೇಔಟ್ ನಲ್ಲಿ ಸ್ನೇಹಿತನ ಮನೆಗೆ ಬಂದಿದ್ದಂತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವಂತ ಘಟನೆ ನಡೆದಿದೆ.
ಈ ಘಟನೆಯೂ ಮೂರು ದಿನಗಳ ಹಿಂದೆ ನಡೆದಿದ್ದು, ಈಗ ಸಂತ್ರಸ್ತ ಮಹಿಳೆ ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೆಳಕಿಗೆ ಬಂದಿದೆ. ಸ್ನೇಹಿತನ ಮನೆಗೆ ತೆರಳಿದ್ದಂತ ಸಂತ್ರಸ್ತ ಮಹಿಳೆಯನ್ನು ಇಬ್ಬರು ಕಾಮುಕರು ತಾವು ಪೊಲೀಸರೆಂದು ಬೆದರಿಸಿ ಅತ್ಯಾಚಾರ ಎಸಗಿದ್ದಾರೆ.
ಇದಷ್ಟೇ ಅಲ್ಲದೇ ಅತ್ಯಾಚಾರದ ಬಳಿಕ ಮಹಿಳೆಯ ಬಳಿ ಹಣಕ್ಕೂ ಡಿಮ್ಯಾಂಡ್ ಮಾಡಿದ್ದಾರೆ. ಮಹಿಳೆಯಿಂದ ಹಣ ಪಡೆದು, ಆಕೆಯ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ಘಟನೆಯ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
BREAKING: ರಾಜ್ಯದಲ್ಲಿ ‘ದ್ವಿಭಾಷಾ ಸೂತ್ರ’ ಜಾರಿಗೊಳಿಸಲು ಸರ್ಕಾರ ಸಿದ್ಧತೆ: ‘ಕರಡು’ ಸಿದ್ಧಪಡಿಸಲು ಸೂಚನೆ
BREAKING: ರಾಜ್ಯದಲ್ಲಿ ಬಂಧಿತ ಮೂವರು ಶಂಕಿತ ಉಗ್ರರಿಗೆ 6 ದಿನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ