ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಬಿಜೆಪಿಯ ಎಂಎಲ್ಸಿ ಎನ್ ರವಿಕುಮಾರ್ ಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣ ರದ್ದುಕೋರಿ ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿ ಆದೇಶಿಸಿತ್ತು.
ಇಂದು ಜಾಮೀನು ಕುರಿತಂತೆ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಜನಪ್ರತಿನಿಧಿಗಳ ನ್ಯಾಯಾಲಯವು, ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂಪಾಯಿ ಮೊತ್ತದ ಬಾಂಡ್, ಒಬ್ಬರ ಶ್ಯೂರಿಟಿ ಒದಗಿಸಲು ಸೂಚಿಸಿದೆ. ಅಲ್ಲದೇ ತನಿಖೆಗೆ ಸಹಕರಿಸಬೇಕು, ಸಾಕ್ಷ್ಯಾಧಾರ ನಾಶಪಡಿಸದಂತೆ ಕೋರ್ಟ್ ಷರತ್ತು ವಿಧಿಸಿದೆ.
ಈಗ ಆಧಾರ್ ಕಾರ್ಡ್ ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ: ಹೀಗಿವೆ UIDAI ಹೊಸ ನಿಯಮಗಳು | Aadhaar Update