ಮಡಿಕೇರಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಹಠಾತ್ ಹೃದಯಾಘಾತದಿಂದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ಹೃದಯಾಘಾತದಿಂದ ಮಹಿಳೆ ಸಾವನ್ನಪ್ಪಿದ್ದಾರೆ. ಹಠಾತ್ ಹೃದಯಾಘಾತದಿಂದ ಸುಮಾ (58) ಮೃತಪಟ್ಟಿದ್ದಾರೆ.
ಸುಮಾ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇದ್ದಿಲ್ಲ. ಆದರೆ ಹಠಾತ್ ಹೃದಯಘಾತದಿಂದ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.