ಮೈಸೂರು: ಸಿದ್ದರಾಮಯ್ಯ ಅವರು ರಾಷ್ಟ್ರರಾಜಕಾರಣಕ್ಕೆ ಹೋಗಲ್ಲ. 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ರಾಷ್ಟ್ರರಾಜಕಾರಣಕ್ಕೆ ಹೋಗುವುಇದಲ್ಲ. 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ. ಸಿಎಂ ಬದಲಾವಣೆ ಚರ್ಚೆ ಹೈಕಮಾಂಡ್ ಮುಂದೆ ನಡೆದಿಲ್ಲ ಎಂದು ತಿಳಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿ ಎಂದು ರಂಭಾಪುರಿ ಶ್ರೀಗಳು ಹೇಳಿರುವುದು ತಪ್ಪಲ್ಲ. ಸಿಎಂ ಸ್ಥಾನದ ಬಗ್ಗೆ ನಿರ್ಧಾರ ಮಾಡುವುದು ಹೈಕಮಾಂಡ್, ನನ್ನ ಪ್ರಕಾರ 5 ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೆ ಎಂದರು.