ಬೆಂಗಳೂರು : ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್’ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ.
ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳೇ ಓದುತ್ತಿದ್ದಾರೆ. ಎಲ್ಕೆಜಿಯಿಂದ ಪಿಯುಸಿ ತನಕ ವಿದ್ಯಾಭ್ಯಾಸ ದೊರೆಯುತ್ತಿದೆ. ಅಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಈ ನಿರ್ಧಾರ ಮಾಡಲಾಗಿದೆ.
ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳು ಓದುತ್ತಿದ್ದಾರೆ. ಎಲ್ಕೆಜಿಯಿಂದ ಪಿಯುಸಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಈ ಶಾಲೆಯ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತವಾಗಿ ಬಸ್ ವ್ಯವಸ್ಥೆ ಆರಂಭಿಸಲು ಸರ್ಕಾರ ತೀರ್ಮಾನ ನಿರ್ಧಾರ ಕೈಗೊಂಡಿದೆ. ಯಾವ ಭಾಗದಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಉಚಿತ ಬಸ್ ವ್ಯವಸ್ಥೆಗಳನ್ನು ಮೊದಲು ಕಲ್ಪಿಸಲಾಗುವುದು.
ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರ್ಕಾರ ಬದ್ಧ!
ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್'ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ.#KarnatakaPublicSchool pic.twitter.com/tnvwFFEMij
— DK Shivakumar (@DKShivakumar) July 11, 2025