ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆಗಳನ್ನು ನಿರ್ಮಿಸಲಾಗಿತ್ತು. ಈ ಹಿನ್ನೆಲೆ ನಿನ್ನೆ ಈ ಒಂದು ಪ್ರದೇಶಕ್ಕೆ ಜಿಲ್ಲಾಧಿಕಾರಿ ಡಾ. ಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿಯ ಕೆಲವು ಮಹಿಳೆಯರು, ನಮಗೆ ಮನೆ ಹಕ್ಕು ಪತ್ರ ಬೇಡ ಮೊದಲು ಗಾಂಜಾ ಮಾರಾಟ ನಿಲ್ಲಿಸಿ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಗೆ ಮಹಿಳೆಯರು ಈ ರೀತಿ ಮನವಿ ಮಾಡಿಕೊಂಡಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲದ ಸುಭಾಷ್ ನಗರದ ಬಡಾವಣೆಯಲ್ಲಿ ಮಹಿಳೆಯರು ಜಿಲ್ಲಾಧಿಕಾರಿಗಳಿಗೆ ಗಾಂಜಾ ಮಾರಾಟ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ನಿನ್ನೆ ಸುಭಾಷ್ ನಗರ ಬಡಾವಣೆಗೆ ಜಿಲ್ಲಾಧಿಕಾರಿ ಡಾ. ಕುಮಾರ್ ಭೇಟಿ ನೀಡಿದ್ದರು. ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆಗಳನ್ನು ನಿರ್ಮಾಣ ಮಾಡಲಾಗಿತ್ತು. ಮನೆಗಳ ಹಕ್ಕು ಪತ್ರ ವಿತರಣೆಯ ಸಭೆಯಲ್ಲಿ ಸ್ಥಳೀಯ ನಿವಾಸಿಗಳು ಜಿಲ್ಲಾಧಿಕಾರಿಗೆ ಗಾಂಜಾ ಮಾರಾಟ ಮಾರಾಟ ತಡೆಗೆ ಕಠಿಣ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.
ನಿತ್ಯ ಏರಿಯಾದಲ್ಲಿ ಗಾಂಜಾ, ಡ್ರಗ್ಸ್ ಮಾರಾಟ ಮಾಡಲಾಗುತ್ತಿದೆ. ದಿನಕ್ಕೆ 800 ಪ್ಯಾಕೇಜ್ ಗಾಂಜಾ ಡ್ರಗ್ಸ್ ಸರಬರಾಜು ಆಗುತ್ತದೆ. ಪೊಲೀಸರ ಗಮನಕ್ಕೆ ತಂದು ಕೆಲವರನ್ನು ಈಗಾಗಲೇ ಗಡಿಪಾರು ಮಾಡಲಾಗಿದೆ. ಆದರೆ ಗಾಂಜಾ ಮಾರಾಟ ಮಾತ್ರ ನಿಲ್ಲುತ್ತಿಲ್ಲವೆಂದು ನಿವಾಸಿಗಳು ಜಿಲ್ಲಾಧಿಕಾರಿಯ ಬಳಿ ಅಳಲು ತೋಡಿಕೊಂಡಿದ್ದಾರೆ. ನಮಗೆ ಮನೆಯ ಹಕ್ಕು ಪತ್ರಗಳನ್ನು ಕೊಡುವುದು ಬೇಡ ಸ್ವಾಮಿ. ಕೈಮುಗಿದು ಬೇಡಿಕೊಳ್ಳುತ್ತಿದ್ದೇವೆ ಕಠಿಣ ಕ್ರಮ ಕೈಗೊಳ್ಳಿ ಎಂದು ಮಹಿಳೆಯರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.








