ಬೆಂಗಳೂರು : ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ನಡೆದ ರಾಷ್ಟ್ರೀಯ ಸಂದರ್ಶನದಲ್ಲಿ, ನಾನೇ ಐದು ವರ್ಷಗಳ ಕಾಲ ಕರ್ನಾಟಕದ ಮುಖ್ಯಮಂತ್ರಿ ಆಗಿರುತ್ತೇನೆ. ಅಲ್ಲದೆ 2028 ರಲ್ಲಿ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಭಾರಿ ಸಂಚಲನ ಸೃಷ್ಟಿಸಿದೆ. ಇದೀಗ ಸತೀಶ್ ಜಾರಕಿಹೊಳಿ ಕೂಡ 2028ಕ್ಕೆ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡಿದರು.
ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, 2028ಕ್ಕೆ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡಿದರು. ಮುಂದಿನ ಬಾರಿಯೂ ಅವರೇ ಸಿಎಂ ಆಗುತ್ತಾರೆ ಅಂತ ನಾನು ಹೇಳಲ್ಲ ಆದರೆ ಸಿದ್ದರಾಮಯ್ಯ ರಾಜಕೀಯದಲ್ಲಿ ಇರುತ್ತಾರೆ. 2028ರ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ನಿನ್ನೆ ಸಿಎಂ ಹೇಳಿದ ಮೇಲೆ ಮುಗೀತು ಆ ಕುರಿತು ಮತ್ತೆ ಚರ್ಚೆ ಮಾಡುವಂತಿಲ್ಲ ಎಂದು ಬೆಂಗಳೂರಲ್ಲಿ ಪಿಡಬ್ಲ್ಯೂಡಿ ಸಚಿವ ಸತಿ ಜಾರಕಿಹೊಳಿ ಹೇಳಿಕೆ ನೀಡಿದರು.








