ಬೆಂಗಳೂರು: ಬೆಂಗಳೂರು: ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವೀಡಿಯೋಗಳು ಅಥವಾ ಸಾಮಾಜಿಕ ಖಾತೆಗಳಲ್ಲಿ ಶೇರ್ ಮಾಡುವುದು ಅಪರಾಧ. ಒಂದು ವೇಳೆ ಹೀಗೆ ಮಾಡಿದರೇ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ ದೂರು ನೀಡಿ, ಅಂತವರ ವಿರುದ್ಧ ಕಾನೂನು ಕ್ರಮವಾಗಲಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವಿಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿ ಅವರ ಮಾನಹಾನಿ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವೀಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ. ಇದು ನಮ್ಮ ಕರ್ನಾಟಕದ ಪರಂಪರೆಯಲ್ಲ. ಕಳೆದ ಕೆಲವು ದಿನಗಳಲ್ಲಿ ಇಂತಹ ಸಾಕಷ್ಟು ಘಟನೆಗಳು ಬೆಳಕಿಗೆ ಬಂದಿದ್ದು, ತಕ್ಷಣವೇ ಕೃತ್ಯ ಎಸಗಿದವರನ್ನು ಬಂಧಿಸಲಾಗುವುದು. ಅಲ್ಲದೇ ಎಲ್ಲಾ ಅಗತ್ಯ ಕಾನೂನು ಕ್ರಮಗಳನ್ನು ಸರ್ಕಾರ ಜರುಗಿಸಿದೆ. ಇದರ ಜೊತೆಗೆ ನಾವು ಇಂತಹ ಕೃತ್ಯಗಳ ಮೇಲೆ ತೀವ್ರ ನಿಗಾ ವಹಿಸಿದ್ದೇವೆ ಎಂದು ತಿಳಿಸಿದ್ದಾರೆ.
ಮಹಿಳೆಯರು ಕೀಳುದೃಷ್ಟಿಯ ಅಥವಾ ಯಾವುದೇ ತರನಾದ ಕಿರುಕುಳಗಳ ಭಯವಿಲ್ಲದೆ ಧೈರ್ಯವಾಗಿ ನಡೆಯಲಾರದ ಸ್ಥಿತಿಗೆ ನಮ್ಮ ಸಮಾಜ ಹೋಗುತ್ತಿದೆ ಎಂದಾದರೆ, ನಾಗರಿಕರಾಗಿ ನಾವು ಯಾವ ದಿಕ್ಕಿನಲ್ಲಿ ಸಾಗುತ್ತಿದ್ದೇವೆ? ಎಂಬುದನ್ನು ಎಲ್ಲರೂ ತಮ್ಮ ಆತ್ಮಸಾಕ್ಷಿಯನ್ನೊಮ್ಮೆ ಪ್ರಶ್ನಿಸಿಕೊಳ್ಳಬೇಕಿದೆ. ಇವು ನಮ್ಮ ಸಾಮಾಜಿಕ ಮೌಲ್ಯಗಳಿಗೆ ವಿರುದ್ಧವಾದವು ಮಾತ್ರವಲ್ಲ, ಕಾನೂನಿನ ರೀತಿಯಲ್ಲಿ ಶಿಕ್ಷಾರ್ಹ ಅಪರಾಧಗಳು ಕೂಡ ಹೌದು ಎಂದು ಹೇಳಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವಿಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿ ಅವರ ಮಾನಹಾನಿ ಮಾಡುವುದು ಶಿಕ್ಷಾರ್ಹ ಅಪರಾಧ.
ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋಗಳು ಅಥವಾ ಖಾತೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದಲ್ಲಿ ತಕ್ಷಣವೇ 1930ಕ್ಕೆ… pic.twitter.com/cBR5J9hVlq
— DIPR Karnataka (@KarnatakaVarthe) July 10, 2025