ಬೆಂಗಳೂರು: ನಾನು ಉಪ ಮುಖ್ಯಮಂತ್ರಿಯಾಗಿ ನನ್ನ ಕೆಲಸ ಮಾಡುತ್ತೇನೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೊಟ್ಟಿರುವಂತ ದೀಕ್ಷೆಯನ್ನು ಸ್ವೀಕಾರ ಮಾಡಿದ್ದೇನೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
ಇಂದು ಐದು ವರ್ಷ ನಾನೇ ಮುಖ್ಯಮಂತ್ರಿ ಎಂಬುದಾಗಿ ಹೇಳಿದಂತ ಸಿಎಂ ಸಿದ್ಧರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದಂತ ಅವರು, ಮುಖ್ಯಮಂತ್ರಿಗಳು ಎಲ್ಲಾ ವಿಚಾರಗಳಿಗೆ ಉತ್ತರ ನೀಡಿದ್ದಾರೆ. ನಾನು ಯಾವುದೇ ಹೇಳಿಕೆ ನೀಡುವುದಿಲ್ಲ ಎಂದರು.
ಮಲ್ಲಿಕಾರ್ಜುನ ಖರ್ಗೆ ನೀಡಿದ ದೀಕ್ಷೆಯಂತೆ ಕೆಲಸ ಮಾಡುವೆ. ಉಪ ಮುಖ್ಯಮಂತ್ರಿಯಾಗಿ ನನ್ನ ಕೆಲಸ ನಾನು ಮಾಡುತ್ತೇನೆ ಎಂಬುದಾಗಿ ತಿಳಿಸಿದರು.
ದೆಹಲಿ ಪ್ರವಾಸದ ಬಗ್ಗೆ ಮಾಧ್ಯಮಗಳು ಕೇಳಿದಾಗ, “ದೆಹಲಿ ಪ್ರವಾಸದಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಸಂಬಂಧ ಅಧಿಸೂಚನೆ ಹೊರಡಿಸುವುದು, ಮೆಕೆದಾಟು ಯೋಜನೆ ಅಪ್ರೈಸಲ್ ವರದಿ ಬಗ್ಗೆ ಚರ್ಚಿಸಲಾಗಿದೆ. ಅರಣ್ಯ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಕಳಸಾ ಬಂಡೂರಿ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಈ ವಿಚಾರವಾಗಿ ಪ್ರಹ್ಲಾದ್ ಜೋಷಿ ಅವರ ಜತೆಗೂ ಮಾತನಾಡಿದ್ದೇನೆ. ಎರಡು ರಾಜ್ಯಗಳ ನಡುವೆ ರಾಜಿಗೆ ಸಲಹೆ ನೀಡಿದ್ದಾರೆ. ನಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈ ವಿಚಾರದಲ್ಲಿ ಕೆಲವು ತಾಂತ್ರಿಕ ಅಂಶಗಳಿವೆ. ಗೋವಾ ದವರು ನಮಗೆ ಶೋಕಾಸ್ ನೋಟೀಸ್ ನೀಡಿರುವುದು ಸರಿಯಲ್ಲ ಎಂದು ಹೇಳಿದ್ದು, ಕಾನೂನು ತಜ್ಞರ ಜೊತೆ ಚರ್ಚೆ ಮಾಡಲಾಗಿದೆ” ಎಂದರು.
“ಜೊತೆಗೆ ಹೊಸ ಯೋಜನೆಗಳಿಗೆ ಮನವಿ ಸಲ್ಲಿಸಿದ್ದೇವೆ. ಸಂಸತ್ ಅಧಿವೇಶನ ಸಂದರ್ಭದಲ್ಲಿ ಮತ್ತೊಮ್ಮೆ ದೆಹಲಿಗೆ ಹೋಗಿ, ರಾಜ್ಯದ ಸಂಸದರ ಜೊತೆ ಚರ್ಚೆ ನಡೆಸಿ ಒಟ್ಟಾಗಿ ಒತ್ತಾಯ ಹೇರಲು ಮನವಿ ಮಾಡಲಾಗುವುದು” ಎಂದು ತಿಳಿಸಿದರು.
ಪಾರ್ಟಿ ಇದ್ರೆ ತಾನೇ ನಾನು, ಪಕ್ಷವೇ ಇಲ್ಲದಿದ್ದರೆ ನಾನಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
ರಾಜ್ಯದ ಕಾರ್ಮಿಕರಿಗೆ ಸಿಹಿಸುದ್ದಿ : ನಾಳೆ `ಸ್ಮಾರ್ಟ್ ಕಾರ್ಡ್’ ವಿತರಣೆ