ಚಿತ್ರದುರ್ಗ : ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 85 ಕ್ಕಿಂತ ಹೆಚ್ಚು ಅಂಕ ಪಡೆದ ಹಿರಿಯೂರು ತಾಲೂಕಿನ ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ. ಕಂದಿಕೆರೆ ಜಗದೀಶ್ ತಿಳಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಜೆರಾಕ್ಸ್ ಹಾಗೂ ಭಾವಚಿತ್ರದೊಂದಿಗೆ ಶ್ರೀ ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ಅರ್ಜಿ ಭರ್ತಿ ಮಾಡಿ ಕಛೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನಾಂಕವಾಗಿದೆ.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ದಿನಾಂಕ ಶೀಘ್ರದಲ್ಲೇ ತಿಳಿಸಲಾಗುವುದು. ಎಲ್ಲಾ ಸಮುದಾಯಗಳ ಅರ್ಹ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಯನ್ನು ಕಛೇರಿಯಲ್ಲಿ ಪಡೆಯಬಹುದು. ಅಂದಿನ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಶ್ರೀ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಂದಿಕೆರೆ ಜಗದೀಶ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬ್ಯಾoಕ್ ನ ನಿರ್ದೇಶಕ ಮಲ್ಲಪ್ಪನಹಳ್ಳಿ ಮಹಾಲಿಂಗಯ್ಯ, ಮನ್ಮಥ, ಶಾಂತರಾಜಯ್ಯ, ಆರ್ ಗೌಡ ಇದ್ದರು.
BREAKING: ಜು.17ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting
ಗ್ರಾಮ ಪಂಚಾಯ್ತಿ ಅಭಿವೃದ್ದಿಯಾದರೆ, ದೇಶ ಅಭಿವೃದ್ದಿಯಾದಂತೆ: ಶಾಸಕ ಗೋಪಾಲಕೃಷ್ಣ ಬೇಳೂರು