ನಾಗ್ಬುರ: ನಾಯಕರು 75 ವರ್ಷಕ್ಕೆ ನಿವೃತ್ತಿಯಾಗಬೇಕು ಎಂಬುದಾಗಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿದಂತ ಹೇಳಿಕೆ ಈಗ ಬಿಜೆಪಿಯಲ್ಲಿ ಭಾರೀ ಸಂಚಲನವನ್ನೇ ಸೃಷ್ಠಿಸಿದೆ.
ನಾಗ್ಬುರದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿರುವಂತ ಅವರು ನಾಯಕರು 75 ವರ್ಷ ತುಂಬಿದ ಬಳಿಕ ಪಕ್ಕಕ್ಕೆ ಸರಿಯಬೇಕು. ಪಕ್ಕಕ್ಕೆ ಸರಿದು ಇತರರಿಗೂ ಕೆಲಸ ಮಾಡಲು ಅವಕಾಶ ಕೊಡಬೇಕು ಎಂದಿದ್ದಾರೆ.
ಇದೇ ಸೆಪ್ಟೆಂಬರ್.17ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು 75 ವರ್ಷಕ್ಕೆ ಕಾಲಿಡುತ್ತಿದ್ದಾರೆ. ಈ ಸಂದರ್ಭದಲ್ಲಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಈ ಹೇಳಿಕೆ ಬಿಜೆಪಿಯಲ್ಲಿ ಭಾರೀ ಸಂಚಲನವನ್ನೇ ಸೃಷ್ಠಿಸಿದೆ.
ಚಿತ್ರದುರ್ಗ: SSLC, PUC ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
BREAKING: ಜು.17ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting