ಮೈಸೂರು: ಮೈಸೂರಿನ ಅಗ್ರಹಾರ ವಾರ್ಡಿನ ರಾಮಾನುಜ ರಸ್ತೆಯಲ್ಲಿ ನಿನ್ನೆ ರಾತ್ರಿ ಮಚ್ಚು ಲಾಂಗು ಗಳಿಂದ ಆಟೋದಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿರುವುದು ನಿಜಕ್ಕೂ ಖಂಡನೀಯ ಎಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.
ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪೋಲಿಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ರಾಮಾನುಜ ರಸ್ತೆಯಲ್ಲಿ ಇಂತಹ ಘಟನೆಗಳು ನಡೆದಿರಲಿಲ್ಲ ಇಂತಹಾ ಘಟನೆಯಿಂದ ಸ್ಥಳೀಯ ನಿವಾಸಿಗಳಿಗೆ ಆತಂಕ ಉಂಟಾಗಿದೆ ಎಂದು ತೇಜಸ್ವಿ ಹೇಳಿದ್ದಾರೆ.
ಕೂಡಲೇ ಆರೋಪಿಗಳನ್ನು ಬಂಧಿಸಿ ಇತರ ಪುಂಡರಿಗೂ ಎಚ್ಚರಿಕೆ ನೀಡಬೇಕೆಂದು ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ.
‘ಶರಾವತಿ ಪಂಪ್ಡ್ ಸ್ಟೋರೇಜ್’ಗೆ ಸ್ಥಳೀಯ ರೈತರು ಭೂಮಿ ನೀಡಲು ಒಪ್ಪಿಗೆ: ಶಾಸಕ ಗೋಪಾಲಕೃಷ್ಣ ಬೇಳೂರು
ನಾಯಕರು 75 ವರ್ಷಕ್ಕೆ ನಿವೃತ್ತಿ ಆಗಬೇಕು: ಭಾರಿ ಸಂಚಲನ ಮೂಡಿಸಿದ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ