ಬೆಂಗಳೂರು : ನಟ ಯುವ ರಾಜ್ ಕುಮಾರ್ ಅವರು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ಜುಲೈ 18 ರಂದು ತೆರೆ ಕಾಣಲಿರುವ ತಾವು ನಾಯಕನಟನಾಗಿ ಅಭಿನಯಿಸಿರುವ “ಎಕ್ಕ” ಸಿನಿಮಾ ಪ್ರೀಮಿಯರ್ ಶೋ ವೀಕ್ಷಣೆಗೆ ಆಗಮಿಸುವಂತೆ ಸಿಎಂ ಸಿದ್ದರಾಮಯ್ಯರನ್ನು ಆಹ್ವಾನಿಸಿದ್ದಾರೆ.
ರಾಜ್ಕುಮಾರ್ ಅವರ ಕುಟುಂಬದ ಜೊತೆಗಿನ ನನ್ನ ಒಡನಾಟ ನಾಲ್ಕೈದು ದಶಕಗಳಷ್ಟು ಹಳೆಯದು. ರಾಘವೇಂದ್ರ ರಾಜ್ಕುಮಾರ್, ಶಿವಣ್ಣ ಮತ್ತು ಅಪ್ಪು ತಮ್ಮ ತಂದೆಯಂತೆ ಅಭಿನಯದಲ್ಲಿ ಮಾತ್ರವಲ್ಲ, ಸಾಮಾಜಿಕ ಕಳಕಳಿಯಲ್ಲೂ ಎತ್ತಿದಕೈ. ರಾಜಣ್ಣನ ಕುಟುಂಬದ ಮೂರನೇ ತಲೆಮಾರು ಅದೇ ಹಾದಿಯಲ್ಲಿ ಹೆಜ್ಜೆಹಾಕಲು ಆರಂಭಿಸಿದ್ದು ಕಂಡು ಖುಷಿಯಾಯಿತು. ಚಿತ್ರ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.
ನಟ ಯುವ ರಾಜ್‌ಕುಮಾರ್ ಅವರು ಇಂದು ಕಾವೇರಿ ನಿವಾಸದಲ್ಲಿ ನನ್ನನ್ನು ಭೇಟಿಯಾಗಿ, ಜುಲೈ 18 ರಂದು ತೆರೆ ಕಾಣಲಿರುವ ತಾವು ನಾಯಕನಟನಾಗಿ ಅಭಿನಯಿಸಿರುವ "ಎಕ್ಕ" ಸಿನಿಮಾ ಪ್ರೀಮಿಯರ್ ಶೋ ವೀಕ್ಷಣೆಗೆ ಆಗಮಿಸುವಂತೆ ಪ್ರೀತಿಯಿಂದ ಆಹ್ವಾನಿಸಿದರು.
ರಾಜ್‌ಕುಮಾರ್ ಅವರ ಕುಟುಂಬದ ಜೊತೆಗಿನ ನನ್ನ ಒಡನಾಟ ನಾಲ್ಕೈದು ದಶಕಗಳಷ್ಟು ಹಳೆಯದು. ರಾಘವೇಂದ್ರ ರಾಜ್… pic.twitter.com/O3npmONwAi
— Siddaramaiah (@siddaramaiah) July 11, 2025