ಬೆಂಗಳೂರು : ಕಳೆದ ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ 11 ಜನ ಆರ್‌ಸಿಬಿ ಅಭಿಮಾನಿಗಳು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾ.ಮೈಕಲ್ ಡಿ.ಕುನ್ಹಾ ಅವರ ವರದಿಯಲ್ಲಿ ಹಲವು ಅಂಶಗಳು ಉಲ್ಲೇಖವಾಗಿವೆ.
ಕುನ್ಹಾ ವರದಿಯಲ್ಲಿ ಕಲ್ತುಳಿತ ಪ್ರಕರಣಕ್ಕೆ KSCA, RCB, DNA ಮತ್ತು ಪೊಲೀಸರೇ ನೇರ ಹೊಣೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸರ್ಕಾರಕ್ಕೆ ಸಲ್ಲಿಸಿರುವ ಮೈಕಲ್ ಡಿ ಕುನ್ಹ ವರದಿಯಲ್ಲಿ ಇವೆಲ್ಲಾ ಅಂಶಗಳು ಉಲ್ಲೇಖವಾಗಿವೆ. ವಿಜಯೋತ್ಸವ ಕಾರ್ಯಕ್ರಮ ನಡೆಸುವುದು ಅಸಾಧ್ಯ ಎಂದು ಗೊತ್ತಿದ್ದರೂ ಕೂಡ ಎಲ್ಲರೂ ಶಾಮಿಲಾಗಿ ಕಾರ್ಯಕ್ರಮ ನಡೆಸಿದ್ದರು. ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲರ ಕರ್ತವ್ಯ ಲೋಪವಾಗಿದೆ.
ಇದರಲ್ಲಿ ಎಲ್ಲರ ನಿರ್ಲಕ್ಷತನದ ಪರಮಾವಧಿ ಎದ್ದು ಕಾಣುತ್ತಿದೆ. ಬಂದೋಬಸ್ತ್ ವ್ಯವಸ್ಥೆ ಸಮರ್ಪಕವಾಗಿರಲಿಲ್ಲ ಎಂದು ಉಲ್ಲೇಖಿಸಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ಇದ್ದಿದ್ದು 79 ಪೋಲೀಸರು ಮಾತ್ರ. ಹೊರಗೆ ಪೊಲೀಸರು ಇರಲಿಲ್ಲ ಆಂಬುಲೆನ್ಸ್ ವ್ಯವಸ್ಥೆ ಸಹ ಇರಲಿಲ್ಲ ಮಧ್ಯಾಹ್ನ 3:25ಕ್ಕೆ ಕಾಲ್ತುಳಿತ ಸಂಭವಿಸಿದ್ದರು ಮಾಹಿತಿ ಇರಲಿಲ್ಲ. ಸಂಜೆ 5:30 ವರೆಗೆ ಪೊಲೀಸ್ ಕಮಿಷನರ್ ಗೆ ಮಾಹಿತಿ ಇಲ್ಲ. ಜಂಟಿ ಪೊಲೀಸ್ ಆಯುಕ್ತರು ಕ್ರೀಡಾಂಗಣಕ್ಕೆ ಬಂದಿದ್ದು 4 ಗಂಟೆಗೆ ಎಂದು ಕುನ್ಹಾ ವರದಿಯಲ್ಲಿ ಇವೆಲ್ಲ ಅಂಶಗಳ ಬಗ್ಗೆ ಉಲ್ಲೇಖಿಸಲಾಗಿದೆ.