ಬೆಂಗಳೂರು : ಒಂದು ಕಡೆ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಎಂದು ಸಿಎಂ ಸಿದ್ದರಾಮಯ್ಯ ದಾಳ ಉರುಳಿಸಿದ್ದಾರೆ. ಇನ್ನು ಇತ್ತ ಹಲವು ಸಚಿವರು, ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾವಣೆ ಆಗಲೇಬೇಕು ಎಂದು ಕೆಲವು ಸಚಿವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾಗಿ ಹಕ್ಕೋತ್ತಾಯ ಮಂಡನೆ ಮಾಡಿದ್ದಾರೆ.
ಹೌದು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಗೆ ಸಚಿವರು ಪಟ್ಟು ಹಿಡಿದಿದ್ದು, ಮಲ್ಲಿಕಾರ್ಜುನ ಖರ್ಗೆ ಮುಂದೆ ಸಚಿವರು ತಮ್ಮ ಹಕ್ಕೋತ್ತಾಯ ಮಂಡಿಸಿದ್ದಾರೆ. ಕಾಂಗ್ರೆಸ್ಸಿನ ಪ್ರಮುಖ ಸಚಿವರು ಮಲ್ಲಿಕಾರ್ಜುನ ಖರ್ಗೆ ಅವರ ಮುಂದೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಹಕ್ಕೋತ್ತಾಯ ಮಂಡಿಸಿದ್ದಾರೆ. ಬದಲಾವಣೆ ಮಾಡುವಂತೆ ಸಚಿವರು ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಒಬ್ಬರಿಗೆ ಒಂದೇ ಹುದ್ದೆ ನಿಯಮ ಅನುಷ್ಠಾನಕ್ಕೆ ಕೆಲವು ಪ್ರಮುಖ ಸಚಿವರು ಖರ್ಗೆ ಅವರಲ್ಲಿ ಮನವಿ ಮಾಡಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ನಿಯಮವನ್ನು ಅನುಷ್ಠಾನಕ್ಕೆ ತನ್ನಿ ಎಂದು ಸಚಿವರು ಆಗ್ರಹಿಸಿದ್ದಾರೆ. ಇದೀಗ ಸಚಿವರ ಒತ್ತಾಯಕ್ಕೆ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಉತ್ತರವನ್ನು ನೀಡಿದ್ದಾರೆ. ಲೋಕಸಭಾ ಚುನಾವಣೆ ಮುಗಿದ ತಕ್ಷಣ ಇದನ್ನು ಮಂಡಿಸಬೇಕಿತ್ತು. ಚುನಾವಣೆ ಮುಗಿದ ತಕ್ಷಣವೇ ಇದನ್ನು ಮಂಡಿಸಬೇಕಿತ್ತು. ಸದ್ಯ ಬೇರೆ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಬದಲಾವಣೆ ಕಷ್ಟ. ನವೆಂಬರ್ ತನಕವೂ ಯಾವುದೇ ಬದಲಾವಣೆಗಳು ಬೇಡ ಎಂದು ಮಲ್ಲಿಕಾರ್ಜುನ ಖರ್ಗೆ ಹಕ್ಕೋತ್ತಾಯ ಮಂಡನೆ ಮಾಡಿದ ಸಚಿವರಿಗೆ ಸ್ಪಷ್ಟ ಉತ್ತರ ನೀಡಿದ್ದಾರೆ.