ಬೆಂಗಳೂರು: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.95ಕ್ಕೂ ಹೆಚ್ಚು ಅಂಕ ಪಡೆದಂತ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಹೂವಿನಹೊಳೆ ಪ್ರತಿಷ್ಠಾನದಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹೂವಿನಹೊಳೆ ಪ್ರತಿಷ್ಠಾನದ ಅಧ್ಯಕ್ಷ ನಂದಿ ಜೆ ಹೂವಿನಹೊಳೆ ಮಾಹಿತಿ ನೀಡಿದ್ದು, ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇಕಡಾ 95ಕ್ಕೂ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆ ಮಕ್ಕಳಿಗೆ ನಮ್ಮ ಸಂಘದಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ರಾಜ್ಯದಲ್ಲಿ ಶೇ.95ಕ್ಕೂ ಹೆಚ್ಚು ಅಂಕವನ್ನು ಪಡೆದಂತ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಕೂಡಲೇ ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದ್ದಾರೆ.
ಹೂವಿನಹೊಳೆ ಪ್ರತಿಷ್ಠಾನದಿಂದ ಖಾಸಗಿ ದಾನಿಗಳ ನೆರವಿನಿಂದ ಹತ್ತು ಸಾವಿರದ ವರೆಗೆ ವಿದ್ಯಾರ್ಥಿ ವೇತನ ನೀಡಲು ಮುಂದೆ ಬಂದಿದೆ. ಅರ್ಜಿ ಸಲ್ಲಿಸಲು ಕಡೆದಿನ ಜುಲೈ.13, 2025 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 8088081008 ಈ ನಂಬರ್ ಗೆ ವಾಟ್ಸ್ ಅಪ್ ನಲ್ಲಿ ಅಂಕಪಟ್ಟಿ ಸಹಿತ ಅರ್ಜಿ ಸಲ್ಲಿಸುವಂತೆ ಕೋರಿದ್ದಾರೆ.
ಅಂದಹಾಗೇ ಶೇ.95ಕ್ಕೂ ಹೆಚ್ಚು ಅಂಕಪಡೆದಂತ ವಿದ್ಯಾರ್ಥಿಗಳು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಪಡೆದ ಅಂಕಗಳ ಮಾಹಿತಿಯನ್ನು ಒಳಗೊಂಡು ಕೂಡಲೇ ಅರ್ಜಿ ಸಲ್ಲಿಸಲು ಹೂವಿನಹೊಳೆ ಪ್ರತಿಷ್ಠಾನದ ಅಧ್ಯಕ್ಷ ನಂದಿ ಜೆ ಹೂವಿನಹೊಳೆ ಮನವಿ ಮಾಡಿದ್ದಾರೆ.