ಬೆಂಗಳೂರು: ಜಾತ್ಯತೀತ ಜನತಾದಳ ಆತ್ಮದಂತೆ ಸೇವಾದಳ ಕೆಲಸ ಮಾಡಬೇಕು ಎಂದು ನಗರ ಜೆಡಿಎಸ್ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ಕರೆ ನೀಡಿದರು.
ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಇಂದು ಕರೆಯಲಾಗಿದ್ದ ಜನತಾದಳ ಸೇವಾದಳದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು; ಸೇವಾದಳ ವಿಭಾಗದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಬಹಳ ಶಿಸ್ತುಬದ್ಧವಾಗಿ, ಅತ್ಯಂತ ದಕ್ಷತೆ ಕ್ಷಮತೆಯಿಂದ ದೇಶವನ್ನು ರಕ್ಷಿಸುವ ಯೋಧರಂತೆ ಕೆಲಸ ಮಾಡಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಬೃಹತ್ ಸದಸ್ಯತ್ವ ಅಭಿಯಾನ ನಡೆಯುತ್ತಿದೆ. ಅವರು ಕೂಡ ಸಂಘಟನೆಗಾಗಿ ರಾಜ್ಯವ್ಯಾಪಿ ಪ್ರವಾಸ ಕೈಗೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಸೇವಾದಳ ವಿಭಾಗದ ಕರ್ತವ್ಯ ಮಹತ್ವದ್ದಾಗಿರುತ್ತದೆ ಎಂದು ರಮೇಶ್ ಗೌಡರು ಒತ್ತಿ ಹೇಳಿದರು.
ಪಕ್ಷದ ಕಚೇರಿಯಲ್ಲಿ ನಡೆಯುವ ಸಭೆ, ಸಮಾರಂಭಗಳು ಹಾಗೂ ಬೃಹತ್ ಸಮಾವೇಶಗಳು ಶಿಸ್ತುಬದ್ಧವಾಗಿ ಯಶಸ್ವಿಯಾಗಿ ನಡೆಯಬೇಕು ಎಂದರೆ ಸೇವಾದಳದ ಪತ್ರ ಹಿರಿದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸೇವಾದಳವೂ ಸಮರ್ಪಣಾ ಭಾವದಿಂದ ಕೆಲಸ ಮಾಡಬೇಕಾಗುತ್ತದೆ ಎಂದು ಅವರು ಕಿವಿಮಾತು ಹೇಳಿದರು.
ಈ ಸಭೆಯಲ್ಲಿ ಸೇವಾದಳ ವಿಭಾಗದ ಅಧ್ಯಕ್ಷ ಪಿ.ಮಹೇಶ್, ಬೆಂಗಳೂರು ನಗರ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಸಂತೋಜಿ ರಾವ್, ಬೆಂಗಳೂರು ನಗರ ಕಾರ್ಯಾಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ, ಮಹಾ ಪ್ರಧಾನ ಕಾರ್ಯದರ್ಶಿ ಎಸ್. ರಮೇಶ, ಗ್ರಾಮ ಪಂಚಾಯಿತಿ ಸದಸ್ಯೆ ತಾರಾ ಲೋಕೇಶ್, ಯುವ ಘಟಕದ ಅಧ್ಯಕ್ಷ ಸ್ಯಾಮುಯಲ್ ಸೇರಿದಂತೆ ಇನ್ನು ಅನೇಕ ಮುಖಂಡರುಗಳು ಪಾಲ್ಗೊಂಡಿದ್ದರು.
ನೀವು SSLC ಪರೀಕ್ಷೆಯಲ್ಲಿ ಶೇ.95ಕ್ಕೂ ಹೆಚ್ಚು ಅಂಕ ಪಡೆದಿದ್ದೀರಾ? ಈಗಲೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ