ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಮಹಾನಗರ ಪಾಲಿಕೆ ನೌಕರರು ಪ್ರತಿಭಟನೆ ನಡೆಸುತ್ತಿದ್ದರು. ಈ ಬೇಡಿಕೆ ಈಡೇರಿಕೆ ಸಂಬಂಧ ಮಂಗಳವಾರ ಸಚಿವ ಬಿಎಸ್ ಸುರೇಶ್ ನೇತೃತ್ವದಲ್ಲಿ ಸಭೆ ನಿಗದಿಯಾಗಿದೆ. ಈ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.
ಈ ಕುರಿತಂತೆ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎ ಅಮೃತ್ ರಾಜ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಹಮ್ಮಿಕೊಂಡಿರುವ ಪ್ರತಿಭಟನೆ/ಮುಷ್ಕರಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳು ನಿರ್ದೇಶನದ ಮೇರೆಗೆ ತಮ್ಮ ಪತ್ರದ ಟಿಪ್ಪಣಿ ದಿನಾಂಕ:11-07-2025 ರಲ್ಲಿ ತಿಳಿಸಿರುವಂತೆ, ದಿನಾಂಕ: 15-07-2025 ಮಂಗಳವಾರ ಸಂಘದ ಪದಾಧಿಕಾರಿಗಳ ಜೊತೆ ಸಭೆ ಕರೆದು ಚರ್ಚಿಸಿ/ತೀರ್ಮಾನಿಸಿ ನಿಯಮಾನುಸಾರ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳುವುದಾಗಿ ತಿಳಿಸಿ ಇಂದೇ ಪ್ರತಿಭಟನೆ ಮುಷ್ಕರವನ್ನು ಅಂತ್ಯಗೊಳಿಸಿ ಈ ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕೆಂದು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.
ಈ ಹಿನ್ನಲೆಯಲ್ಲಿ ಇಂದು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಪಧಾದಿಕಾರಿಗಳೊಂದಿಗೆ ಗೂಗಲ್ ಮೀಟ್ ಮೂಲಕ ಸಭೆಮಾಡಿ ಸಭೆಯ ನಿರ್ಣಯ/ತೀರ್ಮಾನದಂತೆ ಈ ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ಪ್ರತಿಭಟನೆ/ಮುಷ್ಕರವನ್ನು ಮುಂದೂಡಲಾಗುವುದು, ಹಾಗೂ ನಮ್ಮ ನ್ಯಾಯಾಯುತ ಬೇಡಿಕೆಗಳು ಈಡೇರಿಸದೆ ಇದ್ದಲ್ಲಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಚರ್ಚಿಸಿ/ತೀರ್ಮಾನಿಸಿ ಮುಂದಿನ ಹೋರಾಟದ ಬಗ್ಗೆ ನಿಲುವು ಪ್ರಕಟಿಸಲಾಗುವುದೆಂದು ತಿಳಿಸಿದ್ದಾರೆ.
ದೇವಸ್ಥಾನ, ದೇವರ ಕೆಲಸ, ದುಡ್ಡುಲ್ಲಿ ಮೋಸ, ವಂಚನೆ ಇರಬಾರದು: ಗಾಳಿ ಆಂಜನೇಯಸ್ವಾಮಿ ಭಕ್ತರು
ನೀವು SSLC ಪರೀಕ್ಷೆಯಲ್ಲಿ ಶೇ.95ಕ್ಕೂ ಹೆಚ್ಚು ಅಂಕ ಪಡೆದಿದ್ದೀರಾ? ಈಗಲೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ