ಮೈಸೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವು ಮುಂದುವರೆದಿದ್ದು, ಇದೀಗ ಮೈಸೂರಿನಲ್ಲಿ ಬಸ್ ನಲ್ಲಿ ಚಲಿಸುತ್ತಿರುವಾಗಲೇ ಸರ್ಕಾರಿ ನೌಕರರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಮಾರ್ಗ ಮಧ್ಯೆಯೇ ಹೃದಯಘಾತದಿಂದ ಸಾವನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನಲ್ಲಿ ಸರ್ಕಾರಿ ನೌಕರರೊಬ್ಬರು ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸರ್ಕಾರಿ ನೌಕರ ಅರುಣ್ ಎನ್ನುವವರಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದೋಯ್ಯುವಾಗ ಮಾರ್ಗಮಧ್ಯೆ ಅರುಣ್ (44) ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕು ಕಚೇರಿಯಲ್ಲಿ ಅರುಣ್ SDA ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತ ಅರುಣ್ ಮೂಲತಃ ಮಂಡ್ಯ ಜಿಲ್ಲೆಯ ಕಿಲಾರಿ ಗ್ರಾಮದ ನಿವಾಸಿಯಾಗಿದ್ದಾರೆ.