ದಾವಣಗೆರೆ : ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವುಗಳು ಮುಂದುವರೆದಿದ್ದು, ಇಂದು ಬೆಳಗ್ಗೆ ತಾನೇ ಮೈಸೂರಿನಲ್ಲಿ ಬಸ್ ನಲ್ಲಿ ಚಲಿಸುತ್ತಿರುವಾಗಲೇ ಸರ್ಕಾರಿ ನೌಕರರೊಬ್ಬರು ಹೃದಯಾಘಾತದಿಂದ ಸಾವನಪ್ಪಿದ್ದರು. ಇದೀಗ ದಾವಣಗೆರೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಉದ್ಯಮಿಯೊಬ್ಬರು ವಾಕಿಂಗ್ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಹೌದು ವಾಕಿಂಗ್ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಉದ್ಯಮಿ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ಶಕ್ತಿನಗರದ ನಿವಾಸಿ ಅನಿಲ್ ಕುಮಾರ್ (40) ಸಾವನ್ನಪ್ಪಿದ್ದಾರೆ. ಅನೀಲ್ ಕುಮಾರ್ ವಾಕಿಂಗ್ ಮಾಡುತ್ತಿರುವಾಗ ಕುಸಿದು ಬೀಳುತ್ತಿರುವ ದೃಶ್ಯ ಸಮೀಪದ ಅಂಗಡಿಯೊಂದರ ಸಿ ಸಿ ಟಿವಿಯಲ್ಲಿ ಸೆರೆಯಾಗಿದೆ.