ಗದಗ : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಇಂದು ಮೈಸೂರಲ್ಲಿ ಇಬ್ಬರು ದಾವಣಗೆರೆಯಲ್ಲಿ ಒಬ್ಬರು ರಾಯಚೂರಲ್ಲಿ ಒಬ್ಬರು ಸಾವನ್ನಪ್ಪಿದ್ದು, ಇದೀಗ ಗದಗದಲ್ಲೂ ಕೂಡ ಓರ್ವ ಮಹಿಳೆ ಹಾರ್ಟ್ ಅಟ್ಯಾಕ್ ಗೆ ಬಲಿಯಾಗಿದ್ದಾರೆ.
ಹೌದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ನಿವಾಸಿ ಶೋಭಾ ವಡಕಣ್ಣವರ್ (42) ಸಾವನಪ್ಪಿದ್ದಾರೆ. ಎದೆನೋವು ಕಾಣಿಸಿಕೊಂಡ ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿದರು ಕೂಡ ಚಿಕಿತ್ಸೆ ಫಲಕಾರಿ ಆಗದೆ ಶೋಭಾ ಸಾವನ್ನಪ್ಪಿದ್ದಾರೆ. ಆರೋಗ್ಯವಾಗಿದ್ದ ಶೋಭಾ ವಡಕಣ್ಣವರ ಹೃದಯಘಾತದಿಂದ ಸಾವನಪ್ಪಿದ್ದಾರೆ.