Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇವನಹಳ್ಳಿ ಭೂ ಸ್ವಾಧೀನ ಬಿಕ್ಕಟ್ಟಿನ ಬಗ್ಗೆ ಮಂಗಳವಾರ ಸಿಎಂ ಅಂತಿಮ ತೀರ್ಮಾನ: ಸಚಿವ ಎಂ.ಬಿ ಪಾಟೀಲ್
KARNATAKA

ದೇವನಹಳ್ಳಿ ಭೂ ಸ್ವಾಧೀನ ಬಿಕ್ಕಟ್ಟಿನ ಬಗ್ಗೆ ಮಂಗಳವಾರ ಸಿಎಂ ಅಂತಿಮ ತೀರ್ಮಾನ: ಸಚಿವ ಎಂ.ಬಿ ಪಾಟೀಲ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ ಸ್ಥಾಪನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15ರಂದು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಒಟ್ಟಿನಲ್ಲಿ ಕೃಷಿ ಮತ್ತು ಕೈಗಾರಿಕೆ ಎರಡನ್ನೂ ಸರಿದೂಗಿಸಿಕೊಂಡು ಹೋಗಬೇಕೆನ್ನುವುದು ತಮ್ಮ ಕಳಕಳಿಯಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಭಾನುವಾರ ಹೇಳಿದ್ದಾರೆ.

ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ʻಅಲ್ಲಿ ಕೆಲವರು ಭೂಸ್ವಾಧೀನ ಬೇಡವೆಂದು ಹೋರಾಟ ಮಾಡುತ್ತಿದ್ದಾರೆ. ಮತ್ತೆ ಕೆಲವರು 449 ಎಕರೆ ಜಮೀನನ್ನು ಬಿಟ್ಟುಕೊಡಲು ಸಿದ್ಧವಾಗಿದ್ದು, ಎಕರೆಗೆ 3.5 ಕೋಟಿ ರೂ. ಪರಿಹಾರ ಕೇಳುತ್ತಿದ್ದಾರೆ. ರೈತರಲ್ಲೇ ಈ ಬಗ್ಗೆ ಬೇರೆಬೇರೆ ಅಭಿಪ್ರಾಯಗಳಿವೆ. ಸರಕಾರವು ಎಲ್ಲಾ ರೀತಿಯ ಸಾಧಕ-ಬಾಧಕಗಳನ್ನೂ ಪರಿಶೀಲಿಸುತ್ತಿದೆʼ ಎಂದಿದ್ದಾರೆ.

ಶನಿವಾರದಂದು ʻಚನ್ನರಾಯಪಟ್ಟಣ ಹೋಬಳಿ ರೈತ ಹೋರಾಟ ಸಮಿತಿʼ ಹೆಸರಿನಲ್ಲಿ ಕೆಲವು ರೈತರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, 449 ಎಕರೆಯನ್ನು ಸರಕಾರಕ್ಕೆ ಕೊಡುವುದಾಗಿ ಹೇಳಿದ್ದಾರೆ. ಯೋಜನೆಗೆ ಸಂಬಂಧಿಸಿದಂತೆ ಮೊದಲು ಅಧಿಸೂಚನೆ ಹೊರಟಿದ್ದೇ ಇಷ್ಟು ಭೂಮಿಗೆ. ಸರಕಾರವು ನಿಜವಾದ ರೈತರ ದನಿಗೆ ಬೆಲೆ ಕೊಡುತ್ತದೆಯೇ ವಿನಾ ರೈತರ ಹೆಸರಿನಲ್ಲಿ ಏನೇನೋ ಮಾತನಾಡುತ್ತಿರುವವರಿಗಲ್ಲ ಎಂದು ಅವರು ತಿಳಿಸಿದ್ದಾರೆ.

ದೇವನಹಳ್ಳಿ ಸುತ್ತಮುತ್ತ ಯಾವ್ಯಾವ ಬಿಲ್ಡರ್‌ಗಳು ಎಷ್ಟೆಷ್ಟು ಭೂಮಿ ಖರೀದಿಸಿದ್ದಾರೆ, ಯಾರ ಜೊತೆ ಅವರು ಒಪ್ಪಂದ ಮಾಡಿಕೊಂಡಿದ್ದಾರೆ, ಯಾವ ರಾಜಕಾರಣಿಗಳ ಜಮೀನು ಎಷ್ಟಿದೆ, ಹೋರಾಟದ ಹಿಂದ ಯಾರ ಕುಮ್ಮಕ್ಕಿದೆ ಎನ್ನುವುದೆಲ್ಲ ನಮಗೆ ಗೊತ್ತಿದೆ. ದೇವನಹಳ್ಳಿ ಸುತ್ತಲಿನ ಪರಿಸರದಲ್ಲಿ ಕೃಷಿ ಉಳಿಯಬೇಕು ಎನ್ನುವ ಕೂಗೂ ಎದ್ದಿದೆ. ಹೀಗಾಗಿ ಸರಕಾರವು ಶಾಶ್ವತ ಕೃಷಿ ವಲಯ ಮಾಡುವ ಬಗ್ಗೆಯೂ ಚಿಂತಿಸುತ್ತಿದೆ. ಈಗ ಕೆಲವರು ಇದು ಬೇಡ ಎನ್ನುತ್ತಿದ್ದಾರೆ. ಈ ರೀತಿಯ ದ್ವಂದ್ವ ಸರಿಯಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಭೂಸ್ವಾಧೀನ ಬೇಡವೆಂದು ಕೆಲವು ಸಾಹಿತಿಗಳು, ಚಿಂತಕರು ನಮ್ಮ ಪಕ್ಷದ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಅದನ್ನು ನಾನು ವಿರೋಧಿಸುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹೋರಾಡುವ ಹಕ್ಕಿದೆ. ನಾವು ಎಲ್ಲ ಸಾಧ್ಯತೆಗಳನ್ನೂ ಪರಿಶೀಲಿಸುತ್ತಿದ್ದು, ಕಾನೂನು ತಜ್ಞರ ಅಭಿಪ್ರಾಯ ಪಡೆಯುತ್ತಿದ್ದೇವೆ ಎಂದು ಪಾಟೀಲ ನುಡಿದಿದ್ದಾರೆ

ನಾಯಕತ್ವದಲ್ಲಿ ಗೊಂದಲವಿಲ್ಲ

ರಾಜ್ಯ ಕಾಂಗ್ರೆಸ್‌ ಸರಕಾರದಲ್ಲಿ ನಾಯಕತ್ವದ ಗೊಂದಲವೇನೂ ಇಲ್ಲ. ಪಕ್ಷದಲ್ಲಿ ರಾಜ್ಯ ಉಸ್ತುವಾರಿಯಾಗಿರುವ ರಣದೀಪ್‌ ಸುರ್ಜೇವಾಲಾ ಅವರು ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ನಮ್ಮ ಪಕ್ಷದ ಶಾಸಕರ ಅಭಿಪ್ರಾಯ ಕೇಳಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ. ಕೊನೆಗೂ ದುಡ್ಡು ಕೊಡುವುದು ಮುಖ್ಯಮಂತ್ರಿಗಳೇ ತಾನೇ ಎಂದು ಪಾಟೀಲ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ನಮ್ಮ ಐವತ್ತರವತ್ತು ಶಾಸಕರ ಮೇಲೆ ಕಣ್ಣಿಟ್ಟು, ಏಜೆಂಟರನ್ನು ಕಳಿಸುತ್ತಿದೆ ಎಂದು ನಮ್ಮ ಪಕ್ಷದ ಶಾಸಕರೇ ಹೇಳಿದ್ದಾರೆ. ಆದರೆ, ನಮ್ಮಲ್ಲಿ 140ಕ್ಕೂ ಹೆಚ್ಚು ಶಾಸಕರಿದ್ದಾರೆ. ಪಕ್ಷಾಂತರ ಆಗಬೇಕೆಂದರೆ 80-90 ಶಾಸಕರು ಹೋಗಬೇಕಾಗುತ್ತದೆ. ಈಗ ಯಾರೂ ಅಷ್ಟು ಮೂರ್ಖರಿಲ್ಲ. ಹಿಂದೇನೋ 17 ಶಾಸಕರು ಬಿಜೆಪಿಗೆ ಹೋದರು. ಈಗ ಅದೆಲ್ಲ ನಡೆಯುವುದಿಲ್ಲ. ವಾಸ್ತವವಾಗಿ ಬಿಜೆಪಿ-ಜೆಡಿಎಸ್‌ ಕೂಟದ 18-20 ಶಾಸಕರು ಕಾಂಗ್ರೆಸ್‌ ಬಾಗಿಲು ಬಡಿಯುತ್ತಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ತಿರುವಳ್ಳೂರು ಅಗ್ನಿ ಅವಘಡ ಹಿನ್ನಲೆ: ಬೆಂಗಳೂರು ವಿಭಾಗ ಈ ರೈಲುಗಳ ಮಾರ್ಗ ಬದಲಾವಣೆ, ಸಂಚಾರ ರದ್ದು

Share. Facebook Twitter LinkedIn WhatsApp Email

Related Posts

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

1 Min Read

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

3 Mins Read
Recent News

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

State News
KARNATAKA

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಕ್ರಿಕೆಟ್ ಹಾಗೂ ಐಪಿಎಲ್ ಅಭಿಮಾನಿಗಳ ಕ್ರೇಜ್‌ಗೆ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ ಬೇಳೂರು…

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.