ಬೆಂಗಳೂರು: ಸಿಗಂದೂರು ಸೇತುವೆ ಲೋಕಾರ್ಪಣೆಗೊಳ್ಳಲು ದಿನಾಂಕ ನಿಗದಿ ಮಾಡಲಾಗಿತ್ತು. ಇದಕ್ಕಾಗಿ ಎಲ್ಲಾ ಸಿದ್ಧತೆ ನಡೆದು, ಅಂತ್ಯಗೊಂಡಿದೆ. ಇನ್ನೇನಿದ್ದರೂ ಇಂದು ಉದ್ಘಾಟನೆಯನ್ನು ಮಾಡುವುದು ಮಾತ್ರವೇ ಬಾಕಿ ಇದೆ. ಇದೇ ಸಂದರ್ಭದಲ್ಲಿ ಇಂದು ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಸಿಎಂ ಸಿದ್ಧರಾಮಯ್ಯ ಪತ್ರವನ್ನು ಬರೆದು ಮನವಿ ಮಾಡಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದು, ಅದರಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಜುಲೈ 14, 2025 ರಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ನೆಹರು ಕ್ಷೇತ್ರದಲ್ಲಿ “ರಾಷ್ಟ್ರ ಸಮರ್ಪಣೆ ಮತ್ತು ಶಿಲಾನ್ಯಾಸ ಸಮಾರಂಭ” ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಮತ್ತು ಕರಡು ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರನ್ನು ಸಹ ಮುದ್ರಿಸಲಾಗಿದೆ. ಆದಾಗ್ಯೂ, ಈ ಕಾರ್ಯಕ್ರಮದ ಬಗ್ಗೆ ನನಗೆ ಮುಂಚಿತವಾಗಿ ತಿಳಿಸಲಾಗಿಲ್ಲ ಮತ್ತು ಅದೇ ದಿನ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ನನ್ನ ಅಧ್ಯಕ್ಷತೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಈಗಾಗಲೇ ನಿಗದಿಪಡಿಸಲಾಗಿದೆ ಎಂದಿದ್ದಾರೆ.
ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ನಿಗದಿಪಡಿಸುವ ಮೊದಲು MORTH ರಾಜ್ಯ ಸರ್ಕಾರದೊಂದಿಗೆ ಸಮಾಲೋಚಿಸಿದ್ದರೆ ಹೆಚ್ಚು ಸೂಕ್ತವಾಗಿತ್ತು. ಆದ್ದರಿಂದ, ಅಂತಹ ಕಾರ್ಯಕ್ರಮಗಳನ್ನು ಆಯೋಜಿಸುವಾಗ ರಾಜ್ಯ ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ಇಲಾಖೆಗೆ ಸೂಚಿಸಬೇಕೆಂದು ನಾನು ವಿನಂತಿಸುತ್ತೇನೆ. ಅಲ್ಲದೆ, ಈ ಕಾರ್ಯಕ್ರಮವನ್ನು ಮುಂದೂಡಲು ಮನವಿ ಮಾಡಿದ್ದಾರೆ. ಜೊತೆಗೆ ನಿಮಗೆ ಅನುಕೂಲಕರವಾದ ಒಂದೆರಡು ದಿನಾಂಕಗಳನ್ನು ನನಗೆ ಒದಗಿಸುವಂತೆ ನಾನು ವಿನಂತಿಸುತ್ತೇನೆ. ಇದರಿಂದ ನಾನು ಈ ಮಹತ್ವದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ನಿಮ್ಮೊಂದಿಗೆ ಸೇರಲು ಸಾಧ್ಯವಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ದಿನಾಂಕ 11-07-2025ರಂದೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಿಗಂದೂರು ಸೇತುವೆ ಉದ್ಘಾಟನೆಯ ಕಾರ್ಯಕ್ರಮವನ್ನು ಮುಂದೂಡುವಂತೆ, ಮರು ದಿನಾಂಕ ನಿಗದಿ ಪಡಿಸಿ ತಿಳಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದರು. ಆದರೇ ಕಾರ್ಯಕ್ರಮ ಮುಂದೂಡಿಕೆ ಮಾಡಿಲ್ಲ. ಬದಲಾಗಿ ದಿನಾಂಕ 14-07-2025ರ ನಾಳೆ ಮಧ್ಯಾಹ್ನ 12 ಗಂಟೆಗೆ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಲಿದ್ದಾರೆ. ಆ ಬಳಿಕ ಸಾಗರದ ನೆಹರು ಮೈದಾನದಲ್ಲಿ ಮಧ್ಯಾಹ್ನ 2 ಗಂಟೆಗೆ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಲಿದ್ದಾರೆ.
ಸಾಗರ – ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು ತಡವಾಗಿ ಆಮಂತ್ರಿಸಿದ್ದು, ಬೇರೆಡೆ ಕಾರ್ಯಕ್ರಮಗಳನ್ನು ನಾನು ಹಮ್ಮಿಕೊಂಡಿರುವುದರಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಿ, ಬೇರೊಂದು ದಿನ ಆಯೋಜಿಸಬೇಕು ಎಂದು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ… pic.twitter.com/VS5oCRFaLJ
— Siddaramaiah (@siddaramaiah) July 14, 2025