ಶಿವಮೊಗ್ಗ: ನಾಳೆ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿಯ ನೂತನ ಶರಾವತಿ ಹಿನ್ನೀರಿನ ಸೇತುವೆಯನ್ನು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಸೇತುವೆ, ಕಾರ್ಯಕ್ರಮದ ವೇದಿಕೆಯಾದಂತ ನೆಹರು ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಈ ಕುರಿತಂತೆ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಮಾಹಿತಿ ನೀಡಿದ್ದು, ನಾಳೆ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಸಾಗರದಾಧ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು.
ನಾಳೆ ಇಬ್ಬರು ಎಎಸ್ಪಿ, 6 ಡಿವೈಎಸ್ಪಿ, 22 ಸಿಪಿಐ ಹಾಗೂ ಇನ್ಸ್ ಪೆಕ್ಟರ್, 35 ಪಿಎಸ್ಐ, 60 ಎಎಸ್ಐ, 276 ಹೆಚ್ ಸಿ ಪಿಸಿ, 300 ಹೋಂ ಗಾರ್ಡ್ ಸೇರಿದಂತೆ 699 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಇದಲ್ಲದೇ 3 ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ. ಈ ಮೂಲಕ ನಾಳೆಯ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿರುವುದಾಗಿ ಹೇಳಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
Watch Video: ಇಂಗ್ಲೀಷ್ ಮೇಷ್ಟ್ರಾದ ಸಚಿವ ಡಾ.ಶರಣಪ್ರಕಾಶ ಪಾಟೀಲ: ವೀಡಿಯೋ ವೈರಲ್
BIG NEWS: ‘ಸಿಗಂದೂರು ಸೇತುವೆ’ಗಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಯಡಿಯೂರಪ್ಪಗೆ ಬರೆದಿದ್ದ ಪತ್ರ ವೈರಲ್