ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೊಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆ ಕಾರ್ಯ ಇಂದು ನಡೆಯುತ್ತಿದೆ. ಈ ಸೇತುವೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಂತ ಲೋಕೋಪಯೋಗಿ ಸಚಿವ ಸತೀಶ್ ಜಾರಕಹೊಳಿ ಅವರು ಸಾಗರಕ್ಕೆ ಬಂದು, ಭಾಗವಹಿಸದೇ ವಾಪಾಸು ಆಗಿದ್ದಾರೆ.
ಈ ಕುರಿತಂತೆ ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಂಬಾರಗೊಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆ ಆಗುತ್ತಿರುವುದು ಸಂತಸದ ಸಂಗತಿಯಾಗಿದೆ. ಶರಾವತಿ ಹಿನ್ನೀರಿನ ಜನರ ದಶಕಗಳ ಕನಸು ನನಸಾಗುತ್ತಿದೆ. ಆ ಭಾಗದ ಜನರಲ್ಲಿ ಸಂತಸ ಮನೆ ಮಾಡಿದೆ ಎಂದರು. ಇದೇ ಸಂದರ್ಭದಲ್ಲಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸದೇ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಂಗಳೂರಿಗೆ ವಾಪಾಸು ಆದರು.
ಒಟ್ಟಾರೆಯಾಗಿ ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಭಾಗವಹಿಸದೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಿಂದಿರುಗಿದರೇ, ಸ್ಥಳೀಯ ಶಾಸಕ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಕೂಡ ಗೈರಾಗುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು