ಬೆಂಗಳೂರು : ಸುಮಾರು ಆರು ದಶಕಗಳ ಕಾಲ ಕನ್ನಡ ಚಿತ್ರರಂಗ ಸೇರಿದಂತೆ ತೆಲುಗು ತಮಿಳು ಹಿಂದಿ ಭಾಷೆಯಲ್ಲೂ ಕೂಡ ತಮ್ಮ ಅಭಿನಯದ ಮೂಲಕ ಛಾಪು ಮೂಡಿಸಿದ್ದ, ಬಹುಭಾಷಾ ನಟಿ ಬಿ.ಸರೋಜಾದೇವಿ ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇಂದು ಸಾಯಂಕಾಲ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಒಕ್ಕಲಿಗರ ಸಂಪ್ರದಾಯದಂತೆ ನಾಳೆ ಬೆಳಿಗ್ಗೆ 11:30 ಕ್ಕೆ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಹೌದು ನಾಳೆ ಹಿರಿಯ ನಟಿ ಬಿ ಸರೋಜಾ ದೇವಿ ಅಂತ್ಯಕ್ರಿಯೆ ನೆರವಿರಲಿದೆ, ನಾಳೆ ಹುಟ್ಟೂರು ದಶವಾರ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಬೆಳಿಗ್ಗೆ 11:30 ಕ್ಕೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ ಹಾಗಾಗಿ ನಾಳೆವರೆಗೂ ಮಲ್ಲೇಶ್ವರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹಿರಿಯ ನಟಿ ಸರೋಜಾದೇವಿ ಪುತ್ರ ಗೌತಮ್ ಮಾಹಿತಿ ನೀಡಿದ್ದಾರೆ.