ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ದೇಶದ ಅತೀ ಉದ್ದದ 2ನೇ ಕೇಬಲ್ ಸೇತುವೆಯನ್ನು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆಗೊಳಿಸಿದ್ದಾರೆ. ಈ ಮೂಲಕ ಶರಾವತಿ ಹಿನ್ನೀರಿನ ಜನರ ದಶಕಗಳ ಕನಸು ನನಸಾಗಿದೆ.
ಹೌದು ಇಂದು ಶರಾವತಿ ಹಿನ್ನೀರಿನ ಜನರ ಕನಸು ನನಸಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಹ್ಲಾದ್ ಜೋಶಿ ಅವರು ಶರಾವತಿ ಹಿನ್ನೀರಿಗೆ ಬಾಗಿನ ಅರ್ಪಿಸುವ ಮೂಲಕ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಯನ್ನು ಉದ್ಘಾಟಿಸಿದರು.
ಉದ್ಘಾಟನೆಯ ಬಳಿಕ ಗಣಪತಿ ಹೋಮ ಹಾಗೂ ಸಿಗಂದೂರು ಚೌಡೇಶ್ವರಿ ದೇವಿಯ ಪೂಜಾ ಕೈಂಕರ್ಯದಲ್ಲಿ ತೊಡಗಿದಂತೆ ಕೇಂದ್ರ ಸಚಿವರು, ದೇವಿಗೆ ಆರತಿ ಬೆಳಗಿ, ಭಕ್ತಿ ಭಾವದಲ್ಲಿ ಪುನೀತರಾದರು.
ಇಂದಿನ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪರಿಷತ್ ಸದಸ್ಯ ಧನಂಜಯ ಸರ್ಜಿ, ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಗೋಪಾಲಕೃಷ್ಣ ಬೇಳೂರು ಗೈರು
ಇಂದಿನ ಅಂಬಾರಗೋಡ್ಲು-ಕಳಸವಳ್ಳಿ ನೂತನ ಸೇತುವೆ ಉದ್ಘಾಟನೆಗಾಗಿ ಬೆಂಗಳೂರಿನಿಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಾಗರಕ್ಕೆ ಬೆಳಗ್ಗೆಯೇ ಆಗಮಿಸಿದ್ದರು. ಆದರೇ ಕೇಂದ್ರ ಸರ್ಕಾರದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ತಡವಾಗಿ ಆಹ್ವಾನಿಸಿ, ಶಿಷ್ಟಾಚಾರ ಉಲ್ಲಂಘಿಸಲಾಗಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ಅವಮಾನ ಮಾಡಲಾಗಿದೆ ಎಂಬುದಾಗಿ ಮುನಿಸಿನಿಂದಲೇ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗದೇ ಬೆಂಗಳೂರಿಗೆ ಪಾಲಾಸ್ ಆದರು.
ಸಚಿವ ಸತೀಶ್ ಜಾರಕಿಹೊಳಿ ಬೆಂಗಳೂರಿನತ್ತ ತೆರಳಿದರೇ, ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ನಗರದಲ್ಲೇ ಇದ್ದರೂ ಅವರು ಕೂಡ ಸಿಗಂದೂರು ಸೇತುವೆ ಉಲ್ಘಾಟನೆ, ಲೋಕಾರ್ಪಣೆ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು. ಈ ಮೂಲಕ ಇಡೀ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸಿಗಂದೂರು ಸೇತುವೆ ಉದ್ಘಾಟನೆಯ ಇಂದಿನ ಕಾರ್ಯಕ್ರಮದಿಂದ ದೂರವೇ ಉಳಿಯಿತು.
ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್: 500 ಕೋಟಿ ಉಚಿತ ಪ್ರಯಾಣ, ದೇಶದಲ್ಲೇ ಹೊಸ ಮಲ್ಲಿಗಲ್ಲು