ಕಲಬುರ್ಗಿ : ಮಹಾರಾಷ್ಟ್ರದ ಕಲ್ಯಾಣದಲ್ಲಿ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಕಾಂಗ್ರೆಸ್ ಮುಖಂಡ ಲಿಂಗರಾಜ್ ಕಣ್ಣಿಯನ್ನು ಮಹಾರಾಷ್ಟ್ರ ಪೊಲೀಸರು ಇಂದು ಅರೆಸ್ಟ್ ಮಾಡಿದ್ದಾರೆ. ಮಹಾರಾಷ್ಟ್ರದ ಕಲ್ಯಾಣ ಪೊಲೀಸ್ ಠಾಣೆಯಲ್ಲಿ ಲಿಂಗರಾಜ್ ಕಣ್ಣಿ ವಿರುದ್ಧ NDPS ಅಡಿ ಪ್ರಕರಣ ದಾಖಲಾಗಿದ್ದು, ಇದೀಗ ಪ್ರಾಥಮಿಕ ಸದಸ್ಯತ್ವದಿಂದ ಲಿಂಗರಾಜ ಕಣ್ಣಿ ಉಚ್ಚಾಟನೆ ಮಾಡಿ ಕಲಬುರ್ಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ಅದೇಶಿಸಿದ್ದಾರೆ.
ಹೌದು ಕಲ್ಬುರ್ಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ಕಣ್ಣಿಯನ್ನು ಉಚ್ಚಾಟನೆ ಮಾಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್ ಆದೇಶ ಹೊರಡಿಸಿದ್ದಾರೆ. ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಕಾಂಗ್ರೆಸ್ ಮುಖಂಡ ಲಿಂಗರಾಜ್ ಮಹಾರಾಷ್ಟ್ರದ ಠಾಣೆ ನಗರದಲ್ಲಿ ಪೊಲೀಸರು ಇಂದು ಅರೆಸ್ಟ್ ಮಾಡಿದ್ದರು. ಅಲ್ಲದೇ ಬಂಧಿತ ಆರೋಪಿ ಕಲ್ಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಆಪ್ತ ಎಂದು ತಿಳಿದುಬಂದಿದೆ.
ಮಹಾರಾಷ್ಟ್ರದ ಕಲ್ಯಾಣ ಪೊಲೀಸರು ಲಿಂಗರಾಜ್ ಕಣ್ಣಿಯನ್ನು ಇಂದು ಅರೆಸ್ಟ್ ಮಾಡಿದ್ದರು. ಈ ಹಿನ್ನೆಲೆ ಇಂದು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಲಿಂಗರಾಜ ಕಣ್ಣೀಯನ್ನು ಉಚ್ಚಾಟನೆಗೊಳಿಸಿ ಜಗದೇವ ಗುತ್ತೇದಾರ್ ಆದೇಶಿಸಿದ್ದಾರೆ. ನಿಷೇಧಿತ 120 ಕೋಡೆನ್ ಸಿರಪ್ ಬಾಟಲ್ ಗಳನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರದ ಕಲ್ಯಾಣ ಠಾಣೆಯಲ್ಲಿ NDPS ಕಾಯ್ದೆಯ ಅಡಿ ಪ್ರಕರಣ ದಾಖಲಾಗಿದೆ.