ಬೆಂಗಳೂರು : ಹಿರಿಯ ನಟಿ ಬಿ. ಸರೋಜಾದೇವಿ ನಿಧನರಾಗಿದ್ದು, ಇಂದು ಬೆಳಗ್ಗೆ 11 ಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮ ತೋಟದಲ್ಲಿ ಇಂದು ಬೆಳಗ್ಗೆ 11 ಕ್ಕೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ, ತಾಯಿ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ನಿನ್ನೆ ಬೆಂಗಳೂರಿನ ಮಲ್ಲೇಶ್ವರಂ ನಿವಾಸದಲ್ಲಿ ಬಿ ಸರೋಜಾದೇವಿ ಸಾವನ್ನಪ್ಪಿದ್ದಾರೆ. ಸರೋಜಾದೇವಿಯವರು ವಯೋ ಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು ಅಭಿನಯ ಸರಸ್ವತಿಯಂದೆ ಸರೋಜಾದೇವಿ ಖ್ಯಾತಿ ಹೊಂದಿದ್ದರು. ಸುಮಾರು ಆರು ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಐದು ಭಾಷೆಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಚಿತ್ರಗಳಲ್ಲಿ ಸರೋಜಾ ದೇವಿ ನಟಿಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು ಪತಿ ಹರ್ಷ ಸಮಾಧಿ ಪಕ್ಕದಲ್ಲಿ ಮಾಡಿಕೊಳ್ಳಲಾಗಿದೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು ಬೆಂಗಳೂರಿನ ಕೋಡಿಗೆಹಳ್ಳಿಯಲ್ಲಿ ಸರೋಜಾ ದೇವಿಯಂತೆ ಕ್ರಿಯೆ ನಡೆಯಲಿದೆ.
ಬಿ.ಸರೋಜಾ ದೇವಿ ಅವರು 1938 ಜನವರಿ 7ರಂದು ಜನಿಸಿದ್ದಾರೆ. 17ನೇ ವಯಸ್ಸಿನಲ್ಲಿ ಕನ್ನಡ ಚಿತ್ರರಂಗಕ್ಕೆ ಸರೋಜದೇವಿ ಕಾಲಿಟ್ಟಿದ್ದಾರೆ. ಮಹಾಕವಿ ಕಾಳಿದಾಸ ಚಿತ್ರದ ಮೂಲಕ ಸರೋಜಾದೇವಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಹಿರಿಯ ನಟಿ ಸರೋಜಾ ದೇವಿ ಅವರಿಗೆ ಹಲವು ಪ್ರಶಸ್ತಿಗಳು ಕೂಡ ಲಭಿಸಿತ್ತು. 1969ರಲ್ಲಿ ಪದ್ಮಶ್ರೀ ಆತ್ಮ 1992 ರಲ್ಲಿ ಪದ್ಮಭೂಷಣ ಪ್ರಶಸ್ತಿ ಲಭಿಸಿತ್ತು.