ವಿಜಯಪುರ : ವಿಜಯಪುರದಲ್ಲಿ ಸುಶೀಲ್ ಕಾಳೆ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಇಂದು ಬೆಳಗ್ಗೆ 6 ಗಂಟೆಗೆ ವಿಜಯಪುರ ಪೊಲೀಸರು ಆರೋಪಿಗಳನ್ನು ಬಂಧಿಸಲು ಹೋದಾಗ ಆರೋಪಿಗಳು ಪೊಲೀಸರ ಮೇಲೆ ಕಲ್ಲು ತೂರಿ ಪರಾರಿ ಆಗಲು ಯತ್ನಿಸಿದರು. ಕೂಡಲೇ ಪೊಲೀಸರು ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಸುಭಾಷ್ ಬಗಲಿ ಹಾಗೂ ಆಕಾಶ್ ಕಲ್ಲವ್ವಗೊಳ್ಳ ಎಂಬ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸುಶೀಲ್ ಕಾಳೆ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ದುಷ್ಕರ್ಮಿಗಳು ಪರಾರಿಯಾದ ಘಟನೆ ವಿಜಯಪುರದ ಅಮರವರ್ಷಿಣಿ ಸಹಕಾರಿ ಬ್ಯಾಂಕ್ ನಲ್ಲಿ ನಿನ್ನೆ ನಡೆದಿತ್ತು.