ಬೆಂಗಳೂರು : ಹಿರಿಯ ನಟಿ ಬಿ.ಸರೋಜಾದೇವಿ ನಿಧನರಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು ಮಲ್ಲೇಶ್ವರಂನಲ್ಲಿ ನಟಿ ಸರೋಜಾದೇವಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.
ಮಲ್ಲೇಶ್ವರಂ ನಿವಾಸದಲ್ಲಿ ನಟಿ ಬಿ. ಸರೋಜಾದೇವಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಅವರು ಮಾತನಾಡಿದ ಸಿಎಂ ಸಿದ್ದರಾಮಯ್ಯ. ಸಕಲ ಸರ್ಕಾರಿ, ಪೊಲೀಸ್ ಗೌರವಗಳೊಂದಿಗೆ ಹಿರಿಯ ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ ನಡೆಸಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಿರಿಯ ನಟಿ ಬಿ. ಸರೋಜಾದೇವಿ ನಿಧನರಾಗಿದ್ದು, ಇಂದು ಮಧ್ಯಾಹ್ನ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ.
#WATCH | Bengaluru | Karnataka CM Siddaramaiah pays tribute to Veteran Actress B Saroja Devi, who passed away yesterday pic.twitter.com/bWuqUN2YFR
— ANI (@ANI) July 15, 2025
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮ ತೋಟದಲ್ಲಿ ಇಂದು ಮಧ್ಯಾಹ್ನ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ, ತಾಯಿ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
Bengaluru | Karnataka CM Siddaramaiah says, "I had met her several times in the past. Wherever we met, she always spoke with great affection and warmth. She was an actress with a wonderful personality. May her soul rest in peace. She acted in numerous films. There is a proposal… https://t.co/BARD9NrN7k pic.twitter.com/zBcQOAcOT6
— ANI (@ANI) July 15, 2025
ನಿನ್ನೆ ಬೆಂಗಳೂರಿನ ಮಲ್ಲೇಶ್ವರಂ ನಿವಾಸದಲ್ಲಿ ಬಿ ಸರೋಜಾದೇವಿ ಸಾವನ್ನಪ್ಪಿದ್ದಾರೆ. ಸರೋಜಾದೇವಿಯವರು ವಯೋ ಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು ಅಭಿನಯ ಸರಸ್ವತಿಯಂದೆ ಸರೋಜಾದೇವಿ ಖ್ಯಾತಿ ಹೊಂದಿದ್ದರು. ಸುಮಾರು ಆರು ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಐದು ಭಾಷೆಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಚಿತ್ರಗಳಲ್ಲಿ ಸರೋಜಾ ದೇವಿ ನಟಿಸಿದ್ದಾರೆ.