ಬೆಂಗಳೂರು : ರೈತರ ಹೋರಾಟಕ್ಕೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರವು ಭೂಸ್ವಾಧೀನ ಪ್ರಕ್ರಿಯೆನ್ನು ಕೈಬಿಡಲು ಮುಂದಾಗಿದೆ.ಹೌದು, ರಾಜ್ಯ ಸರ್ಕಾರದ ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಯೆ ಸಂಬಂಧ ವಿಧಾನಸೌಧದಲ್ಲಿ ರೈತರ ಜೊತೆಗಿನ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಪ್ರಕಟಿಸಿದ್ದಾರೆ.
ಈ ವಿಚಾರವಾಗಿ ಬಹುಭಾಷಾ ನಟ ಪ್ರಕಾಶ್ ರೈ ಪ್ರತಿಕ್ರಿಯೆ ನೀಡಿದ್ದು, 3 ವರ್ಷಗಳ ಕಾಲ ನಿರಂತರವಾಗಿ ನಡೆದ ಹೋರಾಟಕ್ಕೆ ಜಯ ಸಿಕ್ಕಿದೆ.ರೈತರ ಹೋರಾಟಕ್ಕೆ ಕೊನೆಗೂ ಜಯ ದೊರಕಿದೆ ರೈತರು ಮತ್ತು ರೈತ ಸಂಘಟನೆಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಚರ್ಚಿಸಿ ಈ ಒಂದು ನಿರ್ಧಾರ ತೆಗೆದುಕೊಂಡಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಒಳ್ಳೆಯ ನಿರ್ಧಾರ ಪ್ರಕಟಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರಕ್ಕೆ ಧನ್ಯವಾದಗಳು ಎಂದು ವಿಧಾನಸೌಧದಲ್ಲಿ ಬಹುಭಾಷಾ ನಟ ಪ್ರಕಾಶ್ ರೈ ಹೇಳಿಕೆ ನೀಡಿದರು.
ದೇವನಹಳ್ಳಿ ರೈತರ ಹೋರಾಟಕ್ಕೆ ಅತಿದೊಡ್ಡ ಜಯ ಸಿಕ್ಕಿದ್ದು, ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ರೈತರ ಜೊತೆಗಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಧಾರ ಪ್ರಕಟಿಸಿದ್ದಾರೆ. ದೇವನಹಳ್ಳಿಯಲ್ಲಿ ರೈತರ ಭೂಮಿ ಸ್ವಾಧೀನ ವಿರೋಧಿಸಿ ರೈತರು ಇತ್ತೀಚೆಗೆ ತಾವು ಬೆಳೆದ ಬೆಳೆ, ತರಕಾರಿ, ಹೂವು, ಹಣ್ಣುಗಳ ಬುಟ್ಟಿ ಸಮೇತ ವಿಧಾನಸೌಧಕ್ಕೆ ಆಗಮಿಸಿದ ರೈತರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತರ ಜಮೀನು ಸಾಧೀನ ಪಡಿಸಿಕೊಳ್ಳದಂತೆ ಮನವಿ ಮಾಡಿದ್ದರು.
ದೇವನಹಳ್ಳಿ ಭಾಗದ 13 ಹಳ್ಳಿಗಳ ಸುತ್ತ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಇದರ ವಿರುದ್ಧ ರೈತರು ಸಿಡಿದೆದ್ದಿದ್ದು, ತಮ್ಮ ಜಮೀನು ಉಳಿಸಿಕೊಳ್ಳಲು ಹೋರಾಟ ನಡೆಸಿದ್ದರು. ದೇವನಹಳ್ಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಿಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು. ಇದೀಗ ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ವಾಪಸ್ ಪಡೆದಿದೆ.