ಬೆಂಗಳೂರು : ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ನೋಯಿ ಹೆಸರಿನಲ್ಲಿ ಉದ್ಯಮಿಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿಗಳಾದ ಮೊಹಮ್ಮದ್ ರಫೀಕ್, ಶಿಶುಪಾಲ್ ಸಿಂಗ್ ವನ್ಶ್ ದೇವ್ ಹಾಗೂ ಅಮಿತ್ ಚೌದರಿ ಬಂಧಿತ ಆರೋಪಿಗಳು ಎನ್ನಲಾಗಿದೆ. ಬಂಧಿತ ಮೊಹಮ್ಮದ್ ರಫೀಕ್ ಬೆಂಗಳೂರಿನ ಮಾವಳ್ಳಿ ನಿವಾಸಿಯಾಗಿದ್ದು, ದೆಹಲಿಯಲ್ಲಿ ಮಹಮ್ಮದ್ ವಿರುದ್ಧ ಕೇಸ್ ದಾಖಲಾಗಿತ್ತು.
ತಿಹಾರ್ ಜೈಲಿನಲ್ಲಿದ್ದಾಗ ಆರೋಪಿಗಳು ನಡುವೆ ಪರಿಚಯವಿತ್ತು. ಜೈಲಿನಿಂದ ಹೊರಬಂದ ಬಳಿಕ ಸುಲಿಗೆ ಮಾಡಲು ಸಂಚು ರೂಪಿಸಿದ್ದು ಲಾರೆನ್ಸ್ ವಿಷ್ಣು ಹೆಸರಿನಲ್ಲಿ ಸುಲಿಗೆ ಮಾಡಲು ಯತ್ನಿಸಿದ್ದಾರೆ. ಲಾರೆನ್ಸ್ ಬಿಷ್ನೋಯಿ ಗ್ಯಾಂಗ್ ಗು ಬಂಧಿತರಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ಸದ್ಯ ಆರೋಪಿಗಳನ್ನು ಪೊಲೀಸರು ಕೋರ್ಟಿಗೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ.