ಬೆಂಗಳೂರು: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಸರ್ಕಾರ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಈ ಹಿಂದೆ ಶ್ರೀಮತಿ ವಾಸಂತಿ ಅಮರ್ (ಭಾ.ಆ.ಸೇ) ಹಿಂದಿನ ವಿಶೇಷ ಜಿಲ್ಲಾಧಿಕಾರಿ-3 ಬೆಂಗಳೂರು ಉತ್ತರ ಉಪ ವಿಭಾಗ ರವರು ಬೆಂಗಳೂರು ಉತ್ತರ ತಾಲೂಕು, ದಾಸನಪುರ ಹೋಬಳಿ, ಹುಚ್ಚನಪಾಳ್ಯ ಗ್ರಾಮದ ಸರ್ವೇ ನಂ.8 ರಲ್ಲಿ, 10 ಎಕರೆ 20 ಗುಂಟೆ ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ ಹೊರಡಿಸಿರುತ್ತಾರೆ. ಈ ಪ್ರಕರಣ ಕಾನೂನು ಬಾಹೀರವಾಗಿದ್ದು ಇದೀಗ ಅವರ ವಿರುದ್ಧ FIR ದಾಖಲಾಗಿದೆ.
ಇಂದು ಬೆಂಗಳೂರಿನ 48ನೇ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಾಗಿದ್ದಂತ ಎನ್ ಸಿ ಆರ್ ನಂ 112/2025ರ ಅನುಸಾರ ತನಿಖೆ ಕೈಗೊಳ್ಳಲು ಕೋರಿದ್ದು, ಅದರಂತೆ ನ್ಯಾಯಾಲಯವು ತನಿಖೆ ಕೈಗೊಳ್ಳಲು ಆದೇಶಿಸಿದೆ. ಹೀಗಾಗಿ ಕೆಎಎಸ್ ಅಧಿಕಾರಿ ಪ್ರಶಾಂತ್ ಖಾನಗೌಡ ಪಾಟೀಲ್ ಹಲಸೂರು ಗೇಟ್ ಪೊಲೀಸ್ ಠಾಣೆಗೆ ತೆರಳಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಭಾರತೀಯ ನ್ಯಾಯ ಸಂಹಿತೆ 2023ರಡಿ 257 ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ದೂರಿನಲ್ಲಿ ಏನಿದೆ.?
ಬೆಂಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರಾಗಿರುವಂತ ಕೆ ಎಎಸ್ ಅಧಿಕಾರಿ ಪ್ರಶಾಂತ್ ಖಾನಗೌಡ ಪಾಟೀಲ್ ಅವರು ಠಾಣೆಗೆ ಹಾಜರಾಗಿ ದೂರು ನೀಡಿದ್ದಾರೆ. ಈ ಹಿಂದೆ ಐಎಎಸ್ ಅಧಿಕಾರಿ ವಾಸಂತಿ ಅಮರ್ ಅವರು ವಿಶೇಷ ಜಿಲ್ಲಾಧಿಕಾರಿ-3, ಉತ್ತರ ವಿಭಾಗ, ಬೆಂಗಳೂರು ಉತ್ತರ ತಾಲ್ಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ದಾಸನಪುರ ಹೋಬಳಿ, ಹುಚ್ಚನಪಾಳ್ಯ ಗ್ರಾಮದ ಸರ್ವೆ ನಂ.8ರಲ್ಲಿ 10 ಎಕರೆ 20 ಗುಂಟೆ ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ ಹೊರಡಿಸಿದ್ದಾರೆ. ಇವರ ವಿರುದ್ಧ ದೂರು ದಾಖಲಿಸುವಂತೆ ಸರ್ಕಾರದ ಆದೇಶ, ಕಂದಾಯ ಇಲಾಖೆಯ ಪ್ರಾದೇಶಕ ಆಯುಕ್ತರ ಪತ್ರ ಹಾಗೂ ನೋಟಲ್ ಅಧಿಕಾರಿ, ಆರ್ಥಿಕ ಅಪರಾಧಗಳ ಇಲಾಖೆಯ ರೀತಿಯಲ್ಲಿ ಪ್ರಕರಣ ದಾಖಲಿಸಲು ಕೋರಿದ್ದಾರೆ.
ಈ ಹಿನ್ನಲೆಯಲ್ಲಿ ವಾಸಂತಿ ಅಮರ್, ಭಾರತೀಯ ಆಡಳಿತ ಸೇವೆ ಅಧಿಕಾರಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023 ಕಲಂ 257ರಡಿಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಎನ್ ಸಿ ಆರ್ ನಂ.112/2025 ಅನ್ನು ದಾಖಲಿಸಿಕೊಳ್ಳಲಾಗಿತ್ತು. ನಂತ್ರ 48ನೇ ಎಸಿಎಂಎಂ ಕೋರ್ಟ್ ಮುಂದಿ ಹಾಜರಾಗಿದ್ದು, ಸದರಿ ಎನ್ ಸಿ ಆರ್ ನಲ್ಲಿ ತನಿಖೆ ಕೈಗೊಳ್ಳಲು ಕೋರಿದ್ದು, ಅದರಂತೆ ನ್ಯಾಯಾಧೀಶರು ತನಿಖೆ ಕೈಗೊಳ್ಳಲು ಆದೇಶಿಸಿದ್ದಾರೆ. ಸದರಿ ಆದೇಶ ಆದೇಶ ಪ್ರತಿ ತಂದು ಠಾಣೆಗೆ ಹಾಜರುಪಡಿಸಿದ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
ಒಟ್ಟಾರೆಯಾಗಿ ಈ ಹಿಂದೆ ವಾಸಂತಿ ಅಮರ್ (ಭಾ.ಆ.ಸೇ) ಹಿಂದಿನ ವಿಶೇಷ ಜಿಲ್ಲಾಧಿಕಾರಿ-3 ಬೆಂಗಳೂರು ಉತ್ತರ ಉಪ ವಿಭಾಗ ರವರು ಬೆಂಗಳೂರು ಉತ್ತರ ತಾಲೂಕು, ದಾಸನಪುರ ಹೋಬಳಿ, ಹುಚ್ಚನಪಾಳ್ಯ ಗ್ರಾಮದ ಸರ್ವೇ ನಂ.8 ರಲ್ಲಿ, 10 ಎಕರೆ 20 ಗುಂಟೆ ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ ಹೊರಡಿಸಿರುತ್ತಾರೆ. ಈ ಪ್ರಕರಣ ಕಾನೂನು ಬಾಹೀರವಾಗಿದ್ದು ಇದೀಗ ಅವರ ವಿರುದ್ಧ FIR ದಾಖಲಾಗಿದೆ.