ಬಾಗಲಕೋಟೆ : ರಾಜ್ಯದಲ್ಲಿ ಹೃದಯಾಘಾತದಿಂದ ಸಾವನಪುತ್ತಿರುವವರ ಸರಣಿ ಸಾವುಗಳು ಮುಂದುವರೆದಿದ್ದು, ಇದೀಗ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಮನೆಯ ಹೊರಗಡೆ ಟೀ ಕುಡಿಯುತ್ತಿರುವಾಗಲೇ ಹೃದಯಾಘಾತದಿಂದ ನಗರ ಸಭೆಯ ಮಾಜಿ ಅಧ್ಯಕ್ಷ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಹೌದು ಹೃದಯಾಘಾತದಿಂದ ನಗರಸಭೆಯ ಮಾಜಿ ಅಧ್ಯಕ್ಷ ಸಿದ್ದು ಮೀಸಿ (63) ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ನಗರಸಭೆಯ ಮಾಜಿ ಅಧ್ಯಕ್ಷರಾಗಿದ್ದ ಸಿದ್ದು ಮೀಸಿ ಮನೆಯ ಹೊರಗಡೆ ಚಹಾ ಕುಡಿಯುವ ವೇಳೆ ಹೃದಯಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಜಮಖಂಡಿಯ ಅಂಬೇಡ್ಕರ್ ಸರ್ಕಲ್ ಬಳಿ ಸಿದ್ದು ಮೀಸಿಯವರ ಮನೆ ಇದ್ದು, ಬೆಳಿಗ್ಗೆ ಈ ಒಂದು ಘಟನೆ ನಡೆದಿದೆ. ಮೃತ ಸಿದ್ದುಮೀಸಿ ಜಮಖಂಡಿ ತಾಲೂಕು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಸಹ ಆಗಿದ್ದರು.