ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಗೆರೆಯಲ್ಲಿ ನವಜಾತ ಶಿಶುವಿಗೆ ಹೃದಯಾ ಘಾತವಾಗಿದ್ದು, ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಿಶು ಆರೋಗ್ಯವಾಗಿದೆ.
ರಾಜ್ಯದಲ್ಲಿ ಹೃದಯಾಘಾತದಿಂದ ನಿನ್ನೆ ಒಂದೇ ದಿನ 5 ಜನರು ಬಲಿಯಾಗಿದ್ದಾರೆ. ಕೊಪ್ಪಳದಲ್ಲಿ 26ರ ಯುವತಿ, ಸವಣೂರಲ್ಲಿ 25ರ ಯುವಕ ಸೇರಿ ನಿನ್ನೆ 5 ಜನ ಹೃದಯಾ ಘಾತಕ್ಕೆ ಬಲಿಯಾಗಿದ್ದಾರೆ.
ಕೊಪ್ಪಳದ 26 ವರ್ಷದ ಮಹಿಳೆ ಮಂಜುಳಾ ಹೂಗಾರ(26) ಹೃದಯಾಘಾತದಿಂದಬುಧವಾರಮೃತಪಟ್ಟಿದ್ದಾರೆ. ವಿಜಯನಗರ ಜಿಲ್ಲೆ ಕೊಟ್ಟೂರಿನ ಎಚ್.ಕೆ.ರೇಖಾ (37), ಮಂಡ್ಯದ ಪಾಂಡವಪುರ ತಾಲೂಕಿನ ಗುಮ್ಮನಹಳ್ಳಿಯಲ್ಲಿ ಮಂಜುನಾಥ್ (44), ಬಾಗಲಕೋಟೆಯ ಜಮಖಂಡಿಯಲ್ಲಿ ಸಿದ್ದು ಮೀಸಿ (63) ಎಂಬುವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.