ರಾಜ್ಯ ಸರ್ಕಾರದ ಐದನೇಯ ಗ್ಯಾರಂಟಿ ಯೋಜನೆಯಾದ ಯುವನಿಧಿ -2025ರ ಯೋಜನೆಯ ನೋಂದಣಿ ಅಭಿಯಾನ ಆರಂಭವಾಗಿದ್ದು, 2023, 2024 ಮತ್ತು 2025ರಲ್ಲಿ ಯಾವುದೇ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ಉತ್ತೀರ್ಣ ಅಭ್ಯರ್ಥಿಗಳು ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ/ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಸಿಗದವರು ಹಾಗೂ ಸ್ವಯಂ ಉದ್ಯೋಗ ಮಾಡದವರು, ಉನ್ನತ ವ್ಯಾಸಂಗ ಮುಂದುವರೆಸದೇ ಇರುವವರು ನೋಂದಣಿ ಮಾಡಿಕೊಳ್ಳುವುದು. ಮಾಹೆಯಾನ ನಿರುದ್ಯೋಗ ಭತ್ಯೆ ಪದವೀಧರರಿಗೆ ರೂ. 3000/- ಮತ್ತು ಡಿಪ್ಲೋಮಾ ಪದವೀದರರಿಗೆ ರೂ. 1500/- ಗಳನ್ನು ಖಾತೆಗೆ ನೇರ ನಗದು ಮೂಲಕ ನೀಡಲಾಗುವುದು.
ಆರ್ಹ ಯುವಜನರು ಸೇವಾ ಸಿಂಧು ಪೋರ್ಟಲ್ ಅಥವಾ ಹತ್ತಿರದ ಗ್ರಾಮ ಒನ್, ಶಿವಮೊಗ್ಗ ಒನ್ ಕೇಂದ್ರಗಳಲ್ಲಿ ಆಗಸ್ಟ್ 07 ರೊಳಗಾಗಿ ನೋಂದಾಯಿಸಿಕೊಳ್ಳುವAತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ. ದೂ.ಸಂ.: 08182-255293/ 9380663606 ಇವರುಗಳನ್ನು ಸಂಪರ್ಕಿಸುವುದು.